ಟೈರ್ ಸ್ಪೋಟ; ಕ್ಯಾಂಟರ್ ಪಲ್ಟಿ, ಸಂಚಾರ ಅಸ್ತವ್ಯಸ್ತ

Prasthutha|

ಬೆಂಗಳೂರು: ಚಲಿಸುತ್ತಿದ್ದಾಗ ಟೈರ್ ಸ್ಪೋಟಗೊಂಡು ಕ್ಯಾಂಟರ್ ಲಾರಿಯೊಂದು ಪಲ್ಟಿಯಾದ ಘಟನೆ ನೆಲಮಂಗಲ ತಾಲೂಕಿನ ದೊಡ್ಡೇರಿ ಬಳಿ ಇಂದು ಬೆಳಿಗ್ಗೆ ನಡೆದಿದೆ. ಅದೃಷ್ಟವಶಾತ್ ಚಾಲಕ ಸೇರಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಪಡಿತರ ಆಹಾರ ತುಂಬಿಕೊಂಡು ಹೋಗುತ್ತಿದ್ದ ಕ್ಯಾಂಟರ್ ಲಾರಿ ದೊಡ್ಡೇರಿ ಬಳಿ ಪಲ್ಟಿಯಾಗಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸುಮಾರು 2 ಕಿಲೋ ಮೀಟರ್ ರಸ್ತೆ ಟ್ರಾಫಿಕ್ ಜಾಂ ಆಗಿ ವಾಹನ ಸಂಚಾರ ಅಸ್ಥವ್ಯಸ್ಥಗೊಂಡಿತ್ತು.

ಸುದ್ದಿ ತಿಳಿದು ತಕ್ಷಣವೇ ಸ್ಥಳಕ್ಕೆ ಧಾವಿಸಿದ ನೆಲಮಂಗಲ ಸಂಚಾರಿ ಪೊಲೀಸರು ಲಾರಿಯನ್ನು ತೆರವುಗೊಳಿಸಿ‌ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Join Whatsapp