ಪಶ್ಚಿಮ ಬಂಗಾಳ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಕಾಜಲ್ ಸಿನ್ಹಾ ಕೋವಿಡ್ ಗೆ ಬಲಿ
Prasthutha: April 25, 2021

ಹೊಸದಿಲ್ಲಿ : ಕೊರೊನಾ ಸೋಂಕಿನಿಂದ ಇಡೀ ದೇಶವೇ ತತ್ತರಿಸುತ್ತಿದ್ದು, ಪಶ್ಚಿಮ ಬಂಗಾಳ ಖರ್ದಹ ನಗರದ ತೃಣಮೂಲ ಕಾಂಗ್ರೆಸ್ ಅಭ್ಯರ್ಥಿ ಕಾಜಲ್ ಸಿನ್ಹಾ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕಾಜಲ್ ಸಿನ್ಹಾ ಅವರು ಸಾವನ್ನಪ್ಪಿರುವುದು ಅತ್ಯಂತ ದುಃಖಕರ ಹಾಗೂ ಆಘಾತದ ವಿಚಾರವಾಗಿದೆ. ಪಶ್ಚಿಮ ಬಂಗಾಳದ ಖರ್ದಹ ನಗರದ ಟಿಎಂಸಿ ಅಭ್ಯರ್ಥಿ ಸಿನ್ಹಾ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಅವರು ತಮ್ಮ ಜೀವನವನ್ನು ಜನರ ಸೇವೆಗೆ ಅರ್ಪಿಸಿದವರು. ಪಕ್ಷದಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ್ದಾರೆ ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
