ಪ್ರತಾಪ್ ಸಿಂಹರನ್ನು ಸಂಸದ ಸ್ಥಾನದಿಂದ ಉಚ್ಛಾಟನೆಗೆ ಟಿಎಂಸಿ ಆಗ್ರಹ

Prasthutha|

ಬೆಂಗಳೂರು: ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಬುಧವಾರ ಸದನಕ್ಕೆ ಹಾರಿದ್ದ ಆರೋಪಿಗೆ ಪಾಸ್ ನೀಡಿದ ಆರೋಪದ ಮೇಲೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರನ್ನು ಲೋಕಸಭೆಯಿಂದ ಉಚ್ಛಾಟನೆ ಮಾಡುವಂತೆ ಟಿಎಂಸಿ ಒತ್ತಾಯಿಸಿದೆ.

- Advertisement -

ಅಲ್ಲದೇ, ಹಲವು ಪ್ರಶ್ನೆಗಳನ್ನೂ ಟಿಎಂಸಿ ಎತ್ತಿದೆ. ತಮ್ಮ ಲಾಗಿನ್ ಸೌಲಭ್ಯಗಳನ್ನು ಹಂಚಿಕೊಳ್ಳುವ ಮೂಲಕ ರಾಷ್ಟ್ರೀಯ ಭದ್ರತೆಯನ್ನು ಉಲ್ಲಂಘಿಸಿದ ಆರೋಪದ ಮೇಲೆ ನಮ್ಮ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಅನ್ಯಾಯವಾಗಿ ಹೊರಹಾಕಲಾಗಿದೆ. ಬುಧವಾರ ಕರ್ನಾಟಕದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರು ಸಂಸತ್ತಿಗೆ ಒಳನುಗ್ಗುವವರಿಗೆ ವಿಸಿಟರ್ ಪಾಸ್ ನೀಡುವ ಮೂಲಕ ಇಡೀ ಸಂಸತ್ತಿನ ಭದ್ರತೆಯನ್ನು ಅಪಾಯಕ್ಕೆ ಸಿಲುಕಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದೆ.



Join Whatsapp