Home ಟಾಪ್ ಸುದ್ದಿಗಳು ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರಾಜ್ಯಸಭೆಯಿಂದ ಅಮಾನತು

ನವದೆಹಲಿ: ಸಂಸತ್ ನಲ್ಲಿನ ಭದ್ರತಾ ಲೋಪದ ವಿರುದ್ಧ ಸದನದ ಬಾವಿಗಿಳಿದು ಪ್ರತಿಭಟಿಸಿದ್ದ ಟಿಎಂಸಿ ಸಂಸದ ಡೆರೆಕ್ ಒಬ್ರಿಯಾನ್ ರನ್ನು ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ಚಳಿಗಾಲದ ಅಧಿವೇಶನ ಮುಗಿಯುವವರೆಗೂ ಅವರನ್ನು ಅಮಾನತಿನಲ್ಲಿರಿಸಲಾಗುತ್ತದೆ. ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಓಬ್ರಿಯಾನ್ ಅವರನ್ನು “ಅಶಿಸ್ತಿನ ನಡವಳಿಕೆಯ” ಕಾರಣ ನೀಡಿ ಅಧಿವೇಶನದ ಉಳಿದ ಭಾಗಕ್ಕೆ ರಾಜ್ಯಸಭೆಯಿಂದ ಸಭಾಪತಿ ಜಗದೀಪ್ ಧನ್ಕರ್ ಅಮಾನತುಗೊಳಿಸಿದ್ದಾರೆ.

Join Whatsapp
Exit mobile version