ಟಿಎಂಸಿ ಶಾಸಕ ಸುವೇಂದು ಅಧಿಕಾರಿ ಶಾಸಕ ಸ್ಥಾನಕ್ಕೆ ರಾಜೀನಾಮೆ | ಅಮಿತ್ ಶಾ ಪಶ್ಚಿಮ ಬಂಗಾಳ ಭೇಟಿ ವೇಳೆ ಬಿಜೆಪಿ ಸೇರ್ಪಡೆ ಸಾದ್ಯತೆ

Prasthutha|

ಕೊಲ್ಕತಾ : ಶೀಘ್ರದಲ್ಲೇ ಬಿಜೆಪಿಗೆ ಸೇರಲಿದ್ದಾರೆ ಎನ್ನಲಾಗುತ್ತಿರುವ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ ನಾಯಕ ಸುವೇಂದು ಅಧಿಕಾರಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಸುವೇಂದು ಅಧಿಕಾರಿ ಕಳೆದ ತಿಂಗಳೇ ಪಶ್ಚಿಮ ಬಂಗಾಳ ಸರಕಾರದ ಸಚಿವ ಸ್ಥಾನಕ್ಕೆ ಮತ್ತು ಪಕ್ಷದ ಇತರ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದರು.

- Advertisement -

ಡಿ.19-20ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡುವ ವೇಳೆ ಸುವೇಂದು ಅಧಿಕಾರಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಅವರಿಗೆ ಸುವೇಂದು ರಾಜೀನಾಮೆ ತುಂಬಲಾರದ ನಷ್ಟವಾಗಿದೆ.

- Advertisement -