ಖಾಸಗಿ ಚಿತ್ರ ತೆಗೆದು ಬ್ಲಾಕ್‌ಮೇಲ್| ಯುವಕನನ್ನು ಹತ್ಯೆಗೈದ ವಿದ್ಯಾರ್ಥಿನಿಯರು

Prasthutha: December 21, 2021
ಸಾಂದರ್ಭಿಕ ಚಿತ್ರ

ಚೆನ್ನೈ: ಖಾಸಗಿ ಚಿತ್ರಗಳನ್ನು ತೆಗೆದು ಬ್ಲಾಕ್‌ಮೇಲ್ ಮಾಡಿದ್ದಾನೆಂದು ಯುವಕನೊಬ್ಬನನ್ನು ಇಬ್ಬರು ವಿಧ್ಯಾರ್ಥಿನಿಯರು ಸೇರಿ ಹತ್ಯೆಗೈದ ಘಟನೆ ತಮಿಳುನಾಡಿನ ತಿರುವಾಳ್ಳೂರು ಜಿಲ್ಲೆಯಲ್ಲಿ ನಡೆದಿದೆ.
21 ವರ್ಷದ ಕಾಲೇಜು ವಿದ್ಯಾರ್ಥಿಯನ್ನು 10ನೇ ತರಗತಿಯ ವಿಧ್ಯಾರ್ಥಿನಿಯರು ಹತ್ಯೆಗೈದು ಹೂತಿಟ್ಟಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಿರುವಾಳ್ಳೂರು ಜಿಲ್ಲೆಯ ಈಚಿಂಗಾಡು ಗ್ರಾಮದಲ್ಲಿ ವ್ಯಕ್ತಿಯೊಬ್ಬನ ರಕ್ತಸಿಕ್ತ ಹಲ್ಲು ಮತ್ತು ಕೂದಲು ಇರುವ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಹೂತಿದ್ದ ಶವ ಪತ್ತೆಯಾಗಿದೆ.

ತನಿಖೆಯ ವೇಳೆ ಪೊಲೀಸರಿಗೆ ಸಂತ್ರಸ್ತನ ಮೊಬೈಲ್ ಫೋನ್ ಸಿಕ್ಕಿರುವುದರಿಂದಾಗಿ ಚೆಂಗಾಲಪಟ್ಟು ಜಿಲ್ಲೆಯಲ್ಲಿನ 10ನೇ ತರಗತಿಯ ಇಬ್ಬರು ವಿದ್ಯಾರ್ಥಿನಿಯರ ಸುಳಿವು ಪತ್ತೆಯಾಗಿದೆ. ಬಾಲಕಿಯರನ್ನು ವಿಚಾರಣೆಗೆ ಒಳಪಡಿಸಿದಾಗ ಪ್ರೇಮ್ ಕುಮಾರ್ ತಮ್ಮನ್ನು ಬ್ಲಾಕ್‌ ಮೇಲ್ ಮಾಡಿರುವುದಾಗಿ ತಿಳಿಸಿದ್ದಾರೆ. ಆತ ಒಬ್ಬರಿಗೊಬ್ಬರಿಗೆ ತಿಳಿಯದಂತೆ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ. ಬಾಲಕಿಯರ ಜೊತೆ ಆಕ್ಷೇಪಾರ್ಹ ಫೋಟೊಗಳನ್ನು ತೆಗೆದುಕೊಂಡು ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸುತ್ತಿದ್ದ. ಅಲ್ಲದೆ ಇಬ್ಬರಿಂದಲೂ 50 ಸಾವಿರ ರೂಪಾಯಿಯನ್ನು ಸುಲಿಗೆ ಮಾಡಿದ್ದ ಎನ್ನಲಾಗಿದೆ.

ಬಳಿಕ ಇಬ್ಬರೊಂದಿಗೂ ಪ್ರೇಮ್‌ಕುಮಾರ್ ಸಂಬಂಧ ಹೊಂದಿರುವುದು ತಿಳಿದಿದೆ ಮತ್ತು ಆತನಿಂದ ಬೇಡಿಕೆಯಿಟ್ಟದ್ದ ಹಣವನ್ನು ಒದಗಿಸಲು ಆಗಿರಲಿಲ್ಲ. ಬಳಿಕ ಅವರಿಬ್ಬರೂ ಸಾಮಾಜಿಕ ಮಾಧ್ಯಮಗಳ ಮೂಲಕ ಪರಿಚಿತನಾಗಿದ್ದ ಅಶೋಕ್ ಎಂಬಾತನ ಸಹಾಯ ಕೇಳಿದ್ದಾರೆ ಮತ್ತು ತಾವು ಅನುಭವಿಸುತ್ತಿರುವ ತೊಂದರೆಯನ್ನು ವಿವರಿಸಿದ್ದಾರೆ.

ಅಶೋಕ್ ನೀಡಿದ ಸಲಹೆ ಮೇರೆಗೆ ಬಾಲಕಿಯರು ಪ್ರೇಮ್‌ಕುಮಾರ್‌ಗೆ ಕರೆ ಮಾಡಿ ಶೋಲವರಮ್ ಟೋಲ್ ಪ್ಲಾಜಾ ಬಳಿ ಬರಲು ಹೇಳಿದ್ದಾರೆ. ಬಳಿಕ ಆತನನ್ನು ಅಪಹರಿಸಲಾಗಿದೆ.

ಬಾಲಕಿಯರಿಬ್ಬರೂ ಪ್ರೇಮ್‌ಕುಮಾರ್ ಬಳಿಯಿರುವ ಮೊಬೈಲ್ ಕಸಿದುಕೊಂಡು ಅದರಲ್ಲಿರುವ ಫೋಟೊಗಳನ್ನು ಡಿಲೀಟ್ ಮಾಡುವಂತೆ ಕೇಳಿಕೊಂಡಿದ್ದಾರೆ. ಆದರೆ ಅಶೋಕ್ ಮತ್ತು ಅವನ ಸ್ನೇಹಿತರು ಪ್ರೇಮ್‌ಕುಮಾರ್‌ನನ್ನು ಅಪಹರಿಸಿ ಈಚಂಗಾಡು ಗ್ರಾಮಕ್ಕೆ ಕರೆದೊಯ್ದು ಹತ್ಯೆ ಮಾಡಿ ಅಲ್ಲಿಯೇ ಸಮಾಧಿ ಮಾಡಿದ್ದಾರೆ.

ಪೊಲೀಸರು ತಲೆಮರೆಸಿಕೊಂಡಿರುವ ಅಶೋಕ್ ಮತ್ತು ಅವನ ಸ್ನೇಹಿತರಿಗಾಗಿ ಶೋಧ ಕಾರ್ಯ ಕೈಗೊಂಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!