ಬೆಳಗಾವಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾ ಸಂಪೂರ್ಣ ಬಂದ್ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ರೀತಿ ರಾಜ್ಯದಲ್ಲಿ ಮದರಸಾ ಬಂದ್ ಮಾಡುತ್ತೇವೆ. ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿಯಲು ಶಿವಾಜಿ ಮಹಾರಾಜರು ಕಾರಣರಾಗಿದ್ದಾರೆ. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್, ಅಜರುದ್ದೀನ್ ಪಟೇಲ್ ಆಗಿ ಇರುತ್ತಿದ್ದರು ಎಂದರು.
ಅಸ್ಸಾಂ ಹಿಂದೂಸ್ತಾನ ಬಿಟ್ಟು ಹೋಗುವ ವಾತಾವರಣ ಇತ್ತು. ಆದರೆ ಹಿಮಂತ ಬಿಸ್ವಾ ಶರ್ಮಾರಿಂದ ಅಸ್ಸಾಂನಲ್ಲಿ ಹಿಂದೂಗಳು ಜೀವನ ಮಾಡಲು ಸಾಧ್ಯವಾಯಿತು ಎಂದರು.