Home ಟಾಪ್ ಸುದ್ದಿಗಳು ಬಿಜೆಪಿಯನ್ನು ಸೋಲಿಸಲು, ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು: ಕುಮಾರಸ್ವಾಮಿ

ಬಿಜೆಪಿಯನ್ನು ಸೋಲಿಸಲು, ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು: ಕುಮಾರಸ್ವಾಮಿ

ಬೆಂಗಳೂರು: ಜೆಡಿಎಸ್ ಪಕ್ಷವು ಡಿ.ಕುಪೇಂದ್ರ ರೆಡ್ಡಿ ಅವರನ್ನು ರಾಜ್ಯಸಭೆ ಚುನಾವಣೆಗೆ ತನ್ನ ಮೊದಲ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದೆ. ಅವರು ಉದ್ದಿಮೆದಾರರು, ಸಮಾಜ ಸೇವಕರು ಮತ್ತು ಪ್ರಗತಿಪರ ಚಿಂತಕರು.  ರಾಜ್ಯಸಭೆ ಸದಸ್ಯರಾಗಿ ಅನುಭವವುಳ್ಳ ಅವರನ್ನು ಎಲ್ಲ ಪಕ್ಷಗಳು ಮುಕ್ತ ಮನಸ್ಸಿನಿಂದ ಬೆಂಬಲಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು,  ಜಾತ್ಯತೀತ ಶಕ್ತಿಗಳನ್ನು ಬಲಪಡಿಸಲು ಕಾಂಗ್ರೆಸ್ ಪಕ್ಷ ಕುಪೇಂದ್ರ ರೆಡ್ಡಿ ಅವರಿಗೆ ಪೂರ್ಣ ಬೆಂಬಲ ಕೊಡಬೇಕು.  ಬಿಜೆಪಿಯನ್ನು ಸೋಲಿಸಲು, ತನಗಿಂತ ಹೆಚ್ಚು ಮತ ಹೊಂದಿರುವ ಜೆಡಿಎಸ್ ಅನ್ನು ಕಾಂಗ್ರೆಸ್ ಬೆಂಬಲಿಸಬೇಕು. ಈ ಚುನಾವಣೆಯ ಪರಿಣಾಮಗಳ ಬಗ್ಗೆ ಇತಿಹಾಸ ಮತ್ತು ಜನತೆ ಭವಿಷ್ಯದ ದಿನಗಳಲ್ಲಿ ನಿರ್ಧರಿಸುತ್ತಾರೆ ಎಂಬುದರಲ್ಲಿ ಸಂಶಯವಿಲ್ಲ. ಸುರ್ಜೇವಾಲಾ ಅವರು ಈ ಅಂಶ ಅರ್ಥ ಮಾಡಿಕೊಳ್ಳುತ್ತಾರೆ ಎಂದು ನಂಬಿದ್ದೇನೆ ಎಂದು ತಿಳಿಸಿದ್ದಾರೆ.

Join Whatsapp
Exit mobile version