ನೆಗೆಟಿವ್ ವರದಿ ಇಲ್ಲದೆ ಕೇರಳ, ಮಹಾರಾಷ್ಟ್ರದಿಂದ ಬಂದ 51 ಮಂದಿ ಕ್ವಾರಂಟೈನ್ ಗೆ

Prasthutha|

ಮಂಗಳೂರು, ಆ.3: ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇಲ್ಲದೆ ಕೇರಳ ಮತ್ತು ಮಹಾರಾಷ್ಟ್ರದಿಂದ ಮಂಗಳೂರು ರೈಲು ನಿಲ್ದಾಣಕ್ಕೆ ಆಗಮಿಸಿದ ಸುಮಾರು 51 ಮಂದಿ ಪ್ರಯಾಣಿಕರನ್ನು ನಗರದ ಪುರಭವನದಲ್ಲಿ ತಾತ್ಕಾಲಿಕ ಕ್ವಾರಂಟೈನ್ ನಲ್ಲಿ ಇಡಲಾಗಿದೆ.

- Advertisement -

ಈ ತಂಡದಲ್ಲಿದ್ದ ಮಹಿಳೆಯರನ್ನು ಅವರ ಮನೆಗೆ ಹೋಗಲು ಅವಕಾಶ ನೀಡಿದ್ದು, ಅವರು ಮನೆಯಲ್ಲಿಯೇ ಕ್ವಾರಂಟೈನ್ ಇರುವಂತೆ ಸೂಚಿಸಲಾಗಿದೆ.

ರೈಲು ನಿಲ್ದಾಣದಲ್ಲಿ ಬಂದ ಎಲ್ಲಾ ಪ್ರಯಾಣಿಕರ ಗಂಟಲು ದ್ರವವನ್ನು ಸಂಗ್ರಹಿಸಲಾಗಿದ್ದು, ಅದರ ವರದಿ ಇನ್ನಷ್ಟೇ ಬರಬೇಕಿದೆ. ವರದಿ ನೆಗೆಟಿವ್ ಬಂದರೆ ಅವರನ್ನು ಮನೆಗೆ ಹೋಗಲು ಅವಕಾಶ ಕಲ್ಪಿಸಲಾಗುವುದು. ಒಂದು ವೇಳೆ ಪಾಸಿಟಿವ್ ಬಂದರೆ ಅವರನ್ನು ಕೋವಿಡ್ ಕೇಂದ್ರಗಳಿಗೆ ಸ್ಥಳಾಂತರಿಸಲಾಗುವುದು ಎಂದು ಡಿಸಿಪಿ ಹರಿರಾಮ್ ಶಂಕರ್ ತಿಳಿಸಿದ್ದಾರೆ.

- Advertisement -

ನಗರದ ಎಲ್ಲಾ ರೈಲು ನಿಲ್ದಾಣಗಳಲ್ಲೂ ಪ್ರಯಾಣಿಕರ ಮೇಲೆ ನಿಗಾ ಇಡಲು ತಂಡ ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಪ್ರಯಾಣಿಕರು ಕಡ್ಡಾಯವಾಗಿ ಆರ್ ಟಿಪಿಸಿಆರ್ ನೆಗೆಟಿವ್ ವರದಿ ತರುವಂತೆ ಇತ್ತೀಚೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು.



Join Whatsapp