Home ಟಾಪ್ ಸುದ್ದಿಗಳು ಇಂದು ಹಿಜಾಬ್ ತೀರ್ಪು ಪ್ರಕಟ

ಇಂದು ಹಿಜಾಬ್ ತೀರ್ಪು ಪ್ರಕಟ

ನವದೆಹಲಿ: ರಾಜ್ಯದ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದಿರುವ ಕರ್ನಾಟಕ ಹೈಕೋರ್ಟ್’ನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಮೇಲ್ಮನವಿ ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್ ಇಂದು ಬೆಳಗ್ಗೆ 10.30ಕ್ಕೆ ತೀರ್ಪು ಪ್ರಕಟಿಸಲಿದೆ.

ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರನ್ನೊಳಗೊಂಡ ಪೀಠ ಸತತ 10 ದಿನಗಳ ಕಾಲ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದು, ಸೆಪ್ಟೆಂಬರ್ 22ರಂದು ತನ್ನ ತೀರ್ಪನ್ನು ಕಾಯ್ದಿರಿಸಿದೆ

ನ್ಯಾಯಮೂರ್ತಿ ಗುಪ್ತಾ ಅವರು ಅಕ್ಟೋಬರ್ 16ಕ್ಕೆ ನಿವೃತ್ತರಾಗಲಿದ್ದು, ಈ ನಿಟ್ಟಿನಲ್ಲಿ ಇಂದು ತೀರ್ಪನ್ನು ಪ್ರಕಟಿಸಲಿದ್ದಾರೆ

Join Whatsapp
Exit mobile version