ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕುಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

Prasthutha|

ದಕ್ಷಿಣ ಕನ್ನಡ: ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಇಂದು (ಜು.4) ರಜೆ ಘೋಷಿಸಲಾಗಿದೆ.

- Advertisement -

ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.

ತಾಲೂಕಿನಲ್ಲಿ ಹಲವೆಡೆ ಹಲವಾರು ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದು, ಮಕ್ಕಳನ್ನು ನೀರಿಗೆ ಇಳಿಯದಂತೆ ನೀರಲ್ಲಿ ಆಟವಾಡದಂತೆ ಜಾಗೃತೆ ವಹಿಸಲು ತಿಳಿಸಿದ್ದಾರೆ.

- Advertisement -

ಬಂಟ್ವಾಳ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.

ಕೆಲ ದಿನಗಳ ಹಿಂದೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭಾರೀ ಮಳೆ ಹಿನ್ನೆಲೆಯಲ್ಲಿ ಆಯಾ ತಾಲೂಕಿನ ಪರಿಸ್ಥಿತಿ ನೋಡಿಕೊಂಡು ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ತಾಲೂಕು ಶಿಕ್ಷಣಾಧಿಕಾರಿಗಳಿಗೆ ನೀಡಿದ್ದರು. ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಶಾಲಾ ಕಾಲೇಜು, ಉದ್ಯೋಗಗಳಿಗೆ ಹೋಗುತ್ತಿರುವವರಿಗೆ ತೊಂದರೆಯಾಗುತ್ತಿದೆ. ಅದರಲ್ಲೂ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.



Join Whatsapp