ಬೆಂಗಳೂರು: ವಿಧಾನ ಪರಿಷತ್ ನ ವಾಯುವ್ಯ ಮತ್ತು ದಕ್ಷಿಣ ಪದವೀಧರ ಕ್ಷೇತ್ರ ಹಾಗೂ ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಪ್ರತಿನಿಧಿಗಳ. ಆಯ್ಕೆಗೆ ಇಂದು ಮತದಾನ ನಡೆಯಲಿದ್ದು ರಾಜ್ಯದ11 ಜಿಲ್ಲೆಗಳ ವ್ಯಾಪ್ತಿಯಲ್ಲಿ ಚುನಾವಣೆ ನಡೆಯಲಿದೆ.
ನಾಲ್ಕು ಕ್ಷೇತ್ರಗಳಲ್ಲಿ ಒಟ್ಟು 49 ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದು 417 ಮತಗಟ್ಟೆಗಳನ್ನು ತೆರೆಯಲಾಗಿದೆ. ಇಂದು ಬೆಳಿಗ್ಗೆ 8 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯುತ್ತದೆ. ಮತ್ತು ಜೂನ್ 15 ಬುಧವಾರ ಮತದಾನ ಎಣಿಕೆ ನಡೆಯಲಿದೆ.