ದಕ್ಷಿಣಕನ್ನಡದಲ್ಲಿ ಇಂದಿನಿಂದ ಮಸೀದಿ,ಮಂದಿರ ಪ್ರವೇಶ ನಿಷೇಧ

Prasthutha|

ಮಂಗಳೂರು : ಕೊರೋನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಬಿಡುಗಡೆಗೊಳಿಸಿರುವ ಹೊಸ ಗೈಡ್ ಲೈನ್ಸ್ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ಜಿಲ್ಲೆಯಲ್ಲಿ ಯಾವುದೇ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದ್ದು, ದೇವಾಲಯ ಮಸೀದಿ ಚರ್ಚ್ ನಲ್ಲಿ ಸಾರ್ವಜನಿಕರಿಗೆ ಪೂಜೆಗೆ ಅವಕಾಶ ಇಲ್ಲ ಎಂದು ದ.ಕ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ ವಿ ತಿಳಿಸಿದ್ದಾರೆ.

ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ್ದಾರೆ. ಜಿಲ್ಲೆಯಾದ್ಯಂತ ರಾತ್ರಿ ಒಂಬತ್ತರಿಂದ ಬೆಳಿಗ್ಗೆ ಆರರ ವರೆಗೆ ನೈಟ್ ಕರ್ಫ್ಯೂ ವಿಧಿಸಲಾಗಿದ್ದು, ಜಿಲ್ಲೆಯಲ್ಲಿ ಪ್ರತಿನಿತ್ಯ 5ಸಾವಿರ ಆರ್ಟಿಪಿಸಿಆರ್ ಟೆಸ್ಟ್ ಆಗ್ತಾ ಇದೆ. 31 ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡಲಾಗುತ್ತಿರುವುದರಿಂದ 25 ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲೆಯ ಆಸ್ಪತ್ರೆಗಳಲ್ಲಿ ಇರುವ ಬೆಡ್ ಗಳು ಮತ್ತು ಇತರ ಸಮಸ್ಯೆಗಳ ಬಗ್ಗೆ ಇವರು ನೋಡಿಕೊಳ್ಳುತ್ತಾರೆ. ಎಲ್ಲಾ ಖಾಸಗಿ ಮತ್ತು ಜಿಲ್ಲಾ ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಈ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ. ಈ ಬಗ್ಗೆ ಒಂದು ಮೊಬೈಲ್ ಆ್ಯಫ್ ನೊಂದಿಗೆ ಡ್ಯಾಸ್ ಬೋರ್ಡ್ ಮಾಡಲಾಗುವುದು. ಇದರ ಮೂಲಕ ಜನ ಸಾಮಾನ್ಯರು ಆಸ್ಪತ್ರೆಯಲ್ಲಿ ನ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್ ಸೊನಾವಣೆ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಆರೋಗ್ಯಾಧಿಕಾರಿ, ಡಾ.ಕಿಶೋರ್ ಕುಮಾರ್, ಸಹಾಯಕ ಆಯುಕ್ತ ಮದನ್ ಮೋಹನ್, ವೆನ್ ಲಾಕ್ ಆಸ್ಪತ್ರೆಯ ಅಧೀಕ್ಷಕ ಸದಾಶಿವ ಶ್ಯಾನುಭೋಗ್ ಮೊದಲಾದವರು ಉಪಸ್ಥಿತರಿದ್ದರು.

- Advertisement -