ಒಂದು ಸರ್ಕಾರ, ಪಕ್ಷವನ್ನು ಸೋಲಿಸಲು ಒಂದಾಗೋದು ಸರಿಯಲ್ಲ: ಮೈತ್ರಿಯ ಬಗ್ಗೆ ರೇಣುಕಾಚಾರ್ಯ ಅಸಮಧಾನ

Prasthutha|

ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಬಗ್ಗೆ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

- Advertisement -


ಬಿಜೆಪಿ- ಜೆಡಿಎಸ್ ಮೈತ್ರಿಯ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ರೇಣುಕಾಚಾರ್ಯ, ಬಿಜೆಪಿ ಕಾರ್ಯಕರ್ತರಿಗೆ ಈಗ ಅಸ್ತಿತ್ವದ ಪ್ರಶ್ನೆಯಾಗುತ್ತದೆ. ಒಂದು ಪಕ್ಷದ ವಿರುದ್ಧ ನಾವು ಮೈತ್ರಿಯಾಗಬಾರದು. ರಾಜ್ಯದ ಅಭಿವೃದ್ಧಿಗೆ ಮೈತ್ರಿ ಮಾಡಿಕೊಂಡು ಒಂದಾಗಬೇಕು ಅಥವಾ ನೆಲ ಜಲದ ವಿಚಾರದ ಬಗ್ಗೆ ಮೈತ್ರಿಯಾಗಬೇಕು. ಅದನ್ನು ಬಿಟ್ಟು ಒಂದು ಸರ್ಕಾರ, ಪಕ್ಷವನ್ನು ಸೋಲಿಸಲು ಒಂದಾಗೋದು ಸರಿಯಲ್ಲ ಎಂದು ಹೇಳಿದರು.


ಪ್ರತಿಪಕ್ಷದ ನಾಯಕರನ್ನು ಇನ್ನೂ ಆಯ್ಕೆ ಮಾಡಿಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿಲ್ಲ. ಅತ್ಮಾವಲೋಕನ ಮಾಡಿಕೊಂಡು ಮುನ್ನಡೆದರೆ ಬಿಜೆಪಿಗೆ ಒಳಿತು. ಅದನ್ನು ಬಿಟ್ಟು ಪ್ರಧಾನಿ ನರೇಂದ್ರ ಮೋದಿಯವರ ಹೆಸರು ಹೇಳಿಕೊಂಡು ಹೋಗುತ್ತಿದ್ದಾರೆ. ಇಲ್ಲಿ ಅದನ್ನು ಮತಗಳಾಗಿ ಪರಿವರ್ತನೆ ಮಾಡೋದು ರಾಜ್ಯ ನಾಯಕರ ಕರ್ತವ್ಯವಲ್ಲವೇ ಎಂದು ಪ್ರಶ್ನಿಸಿದ್ದಾರೆ.

Join Whatsapp