Home ಕ್ರೀಡೆ ಟೋಕಿಯೋ ಒಲಿಂಪಿಕ್ಸ್: ಭಾರತೀಯ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಟೋಕಿಯೋ ಒಲಿಂಪಿಕ್ಸ್: ಭಾರತೀಯ ಮಹಿಳಾ ಹಾಕಿ ತಂಡ ಕ್ವಾರ್ಟರ್ ಫೈನಲ್ ಗೆ ಲಗ್ಗೆ

ಟೋಕಿಯೋ: ಟೋಕಿಯೋ ಒಲಿಂಪಿಕ್ಸ್-2020 ರ ಕ್ರೀಡಾಕೂಟದಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಕ್ವಾರ್ಟರ್ ಫೈನಲ್ ಗೆ ಲಗ್ಗೆ ಇಟ್ಟಿದೆ. ಇಂದು ನಡೆದ ಬ್ರಿಟನ್ ವಿರುದ್ಧದ ಪಂದ್ಯದಲ್ಲಿ ಐರ್ಲೆಂಡ್ ಸೋಲನ್ನಪ್ಪಿದ ಹಿನ್ನೆಲೆ ಅಂಕಗಳ ಆಧಾರದ ಮೇಲೆ ಭಾರತ ಮಹಿಳಾ ತಂಡವು ಕ್ವಾರ್ಟರ್ ಫೈನಲ್ ಗೆ ಪ್ರವೇಶಿಸಿದೆ.

ಇಂದು ನಡೆದ ಪಂದ್ಯದಲ್ಲಿ ಬ್ರಿಟನ್ ಮಹಿಳಾ ಹಾಕಿ ತಂಡವು ಐರ್ಲೆಂಡ್ ತಂಡವನ್ನ 2-0 ಅಂತರದಲ್ಲಿ ಪರಾಭವಗೊಳಿಸಿತು. ಇದರಿಂದ 6 ಅಂಕ ಪಡೆದಿದ್ದ ಭಾರತೀಯ ಮಹಿಳಾ ಹಾಕಿ ತಂಡವು ‘ಎ’ ವಿಭಾಗದ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶವನ್ನ ಪಡೆಯುವಂತಾಯಿತು. ಇದಕ್ಕೂ ಮೊದಲು ಭಾರತ ತಂಡವು ದಕ್ಷಿಣ ಆಫ್ರಿಕಾ ತಂಡವನ್ನ 4-3 ಅಂತರದಲ್ಲಿ ಸೋಲಿಸಿತ್ತು. ಕೂಟದ 5 ಪಂದ್ಯಗಳಲ್ಲಿ 2 ಅನ್ನು ಗೆದ್ದು ಭಾರತ ನಾಲ್ಕನೇ ಸ್ಥಾನ ಪಡೆದಿತ್ತು.

ಕ್ವಾರ್ಟರ್ ಫೈನಲ್ ನಲ್ಲಿ ಭಾರತ ಮಹಿಳಾ ಹಾಕಿ ತಂಡವು ಆಸ್ಟ್ರೇಲಿಯಾ ವಿರುದ್ಧ ಸೆಣಸಾಡಬೇಕಿದೆ.

Join Whatsapp
Exit mobile version