ಟೊಮೆಟೊ ಜ್ವರ ಭೀತಿ: ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ !

Prasthutha|

ಬೆಂಗಳೂರು: ಮಕ್ಕಳಲ್ಲಿ ಕಂಡುಬರುವ ಟೊಮೆಟೊ ಜ್ವರ ಹರಡುವಿಕೆ ತಡೆಗಟ್ಟುವ ಸಲುವಾಗಿ ಕೇರಳ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರದ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ‌.

- Advertisement -

ಟೊಮೆಟೊ ಜ್ವರ ಪ್ರಕರಣಗಳು 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಾಣಿಸಿಕೊಂಡಿದ್ದು, ಈ ರೋಗ, ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಮೊದಲಾದ ಲಕ್ಷಣಗಳನ್ನು ಹೊಂದಿದೆ.

ಕೇರಳದಲ್ಲಿ ರೋಗದ ಪ್ರಕರಣಗಳು ಪತ್ತೆಯಾಗಿರುವುದರಿಂದ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇರಿಸಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.



Join Whatsapp