ಕೇರಳದಲ್ಲಿ ಟೊಮೆಟೋ ವೈರಸ್ : 5 ವರ್ಷದ ಕೆಳಗಿನ ಮಕ್ಕಳಿಗೆ ಹೆಚ್ಚು ಸೋಂಕು

Prasthutha|

ಕೇರಳ: ಕೊರೊನಾ ಮಹಾಮಾರಿಯ ಆರ್ಭಟ ಮುಗಿಯುವುದರೊಳಗೆ ಕೇರಳದಲ್ಲಿ ಹೊಸ ಸೋಂಕೊಂದು ಕಂಡು ಬಂದಿದ್ದು ಟೊಮೇಟೋ ವೈರಸ್ ಅಥವಾ ಟೊಮೇಟೋ ಜ್ವರ ಎಂದು ಕರೆಯಲ್ಪಡುತ್ತಿರುವ‌ ಈ ಜ್ವರ ಕೇರಳಿಗರ ಆತಂಕಕ್ಕೆ ಕಾರಣವಾಗಿದೆ.

- Advertisement -

ಕೇರಳದ ಕೊಲ್ಲಂ ಜಿಲ್ಲೆಯೊಂದರಲ್ಲೇ ಬರೋಬ್ಬರಿ 82 ಸೋಂಕಿತ ಪ್ರಕರಣಗಳು ವರದಿಯಾಗಿದ್ದು ಈ ಸೋಂಕು ತಗುಲಿದವರೆಲ್ಲ ಹೆಚ್ಚು 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಎಂದು ವರದಿಯಾಗಿದೆ.

ಟೊಮೇಟೊ ಜ್ವರ ಅಪರೂಪದ ವೈರಲ್ ಸೋಂಕು ಆಗಿದ್ದು, ಮಕ್ಕಳಲ್ಲಿ ಗುಳ್ಳೆ ಮತ್ತು ಚರ್ಮದ ಕಿರಿಕಿರಿ ಮತ್ತು ನಿರ್ಜಲೀಕರಣ ಕಂಡು ಬರುತ್ತಿದೆ. ಇದರಿಂದ ದೇಹದ ಹಲವು ಭಾಗಗಳಲ್ಲಿ ಗುಳ್ಳೆಗಳನ್ನು ಉಂಟಾಗುತ್ತಿದ್ದು ಈ ಗುಳ್ಳೆಗಳು ಸಾಮಾನ್ಯವಾಗಿ ಕೆಂಪು ಬಣ್ಣದ ದುಂಡಗಿನ ಆಕಾರದಲ್ಲಿ ಇರುವುದರಿಂದ ಇದನ್ನು ಟೊಮೇಟೋ ಜ್ವರ ಎಂದು ಕರೆಯಲಾಗುತ್ತಿದೆ.

- Advertisement -

ಕೊಲ್ಲಂ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಾತ್ರ ಈ ರೀತಿಯ ಜ್ವರದ ಪ್ರಕರಣಗಳು ವರದಿಯಾಗಿದ್ದು, ಇದು ಇತರ ಪ್ರದೇಶಗಳಿಗೂ ಹರಡಬಹುದು ಎಂದು ರಾಜ್ಯ ಆರೋಗ್ಯ ಅಧಿಕಾರಿಗಳು ಎಚ್ಚರಿಸಿದ್ದಾರೆ.



Join Whatsapp