ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ ಜುಲೈ 19ರಂದು ರಜೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ 19-07-2024ರಂದು ಶುಕ್ರವಾರ ರಜೆ ಘೋಷಿಸಲಾಗಿದೆ. ಮಳೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಆದೇಶ ನೀಡಿದ್ದಾರೆ.
ಮಂಗಳೂರು, ಉಳ್ಳಾಲ, ಮೂಡಬಿದಿರೆ, ಮುಲ್ಕಿ ತಾಲೂಕುಗಳಿಗೆ ರಜೆ ಇಲ್ಲ ಎಂದೂ ಜಿಲ್ಲಾಧಿಕಾರಿಯ ಪ್ರಕಟಣೆ ತಿಳಿಸಿದೆ.