ನಾಳೆ SDPI ಪಕ್ಷದ ಸಂಸ್ಥಾಪನಾ ದಿನಾಚರಣೆ

Prasthutha|

ಮಂಗಳೂರು : ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ 15ನೇ ಸಂಸ್ಥಾಪನಾ ದಿನಾಚರಣೆಯು ಜೂನ್ 21 ರಂದು ಬುಧವಾರ ರಾಷ್ಟ್ರದಾದ್ಯಂತ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ನಾಳೆ ಬೆಳಗ್ಗೆ 11 ಗಂಟೆಗೆ ದೇರಳಕಟ್ಟೆಯ ಪಕ್ಷದ ಕಚೇರಿ ಎದುರು ದ್ವಜಾರೋಹಣ ನಡೆಯಲಿದೆ.

- Advertisement -

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ದೂರು, “15 ನೇ ವರ್ಷದೆಡೆಗೆ ಸ್ವಾಭಿಮಾನಿ ಮತ್ತು ಜನಪರ ರಾಜಕೀಯದ ದಿಟ್ಟ ಹೆಜ್ಜೆಗಳು” ಎಂಬ ಘೋಷಣೆಯೊಂದಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ತನ್ನ 15 ನೇ ಸಂಸ್ಥಾಪನಾ ದಿನಾಚರಣೆ ಆಚರಿಸುತ್ತಿದೆ. ಇದರ ಭಾಗವಾಗಿ  SDPI ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೂತ್ ಮಟ್ಟದಿಂದ ಜಿಲ್ಲಾ ಮಟ್ಟದ ವರೆಗಿನ ಎಲ್ಲಾ ಸ್ತರದ ಸಮಿತಿಗಳಲ್ಲಿ ದ್ವಜಾರೋಹಣ ಮತ್ತು ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ, ಸಾರ್ವಜನಿಕರಿಗೆ ಸಿಹಿತಿಂಡಿ ವಿತರಣೆ ನಡೆಯಲಿದೆ ಎಂದು ತಿಳಿಸಿದ್ದಾರೆ.

 ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ನಾಳೆ ಬೆಳಗ್ಗೆ 11 ಗಂಟೆಗೆ ದೇರಳಕಟ್ಟೆಯ ಪಕ್ಷದ ಕಚೇರಿ ಎದುರು ದ್ವಜಾರೋಹಣ ಹಾಗೂ ಪಕ್ಷದ ಸಂದೇಶ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ರಾಷ್ಟ್ರೀಯ, ರಾಜ್ಯ, ಜಿಲ್ಲಾ ನಾಯಕರು ಭಾಗವಹಿಸಲಿದ್ದಾರೆ ಎಂದು ಅಶ್ರಫ್ ಮಾಹಿತಿ ನೀಡಿದ್ದಾರೆ.