Home ಕರಾವಳಿ ನಾಳೆ ವಿಶ್ವ ಜನಸಂಖ್ಯಾ ದಿನಾಚರಣೆ

ನಾಳೆ ವಿಶ್ವ ಜನಸಂಖ್ಯಾ ದಿನಾಚರಣೆ

ಮಂಗಳೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ತಾಲೂಕು ವೈದ್ಯಾಧಿಕಾರಿ ಕಚೇರಿ, ರಾಷ್ಟ್ರೀಯ ಸೇವಾ ಯೋಜನೆ, ಸ್ನಾತಕೋತ್ತರ ವಿಭಾಗಗಳು ಹಾಗೂ ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಮಂಗಳೂರು ತಾಲೂಕು ಮಟ್ಟದ ವಿಶ್ವ ಜನಸಂಖ್ಯಾ ದಿನಾಚರಣೆ-2023 ಕಾರ್ಯಕ್ರಮ ನಾಳೆ (ಜು.11ರ ಮಂಗಳವಾರ) ಬೆಳಿಗ್ಗೆ 10 ಗಂಟೆಗೆ ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಪ್ರಾಂಶುಪಾಲರಾದ ಅನುಸೂಯ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ. ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ್ ಸಿ.ಎಲ್ ಅವರು ಘನ ಉಪಸ್ಥಿತಿ ವಹಿಸುವರು.

ಮುಖ್ಯ ಅತಿಥಿಗಳಾಗಿ ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತ ರಾಜು ಕೆ., ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಕಿಶೋರ್ ಕುಮಾರ್ ಎಂ., ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರು ಮತ್ತು ಅಧೀಕ್ಷಕ ಡಾ. ಸದಾಶಿವ ಶಾನುಭೋಗ್, ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ದುರ್ಗಾಪ್ರಸಾದ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ದೀಪಾ ಪ್ರಭು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಡಾ. ನಾಗರತ್ನ ಕೆ.ಎ. ಭಾಗವಹಿಸುವರು.

ಸಂಪನ್ಮೂಲ ವ್ಯಕ್ತಿಯಾಗಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ಸ್ನಾತಕೋತ್ತರ, ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರು ಮತ್ತು ಸಂಯೋಜಕರಾದ ಡಾ. ರಾಮಕೃಷ್ಣ ಅವರು ಭಾಗವಹಿಸುವರು.

Join Whatsapp
Exit mobile version