ಉಡುಪಿ, ಕೊಡಗು ಜಿಲ್ಲೆಗಳಲ್ಲಿ ನಾಳೆ (ಜುಲೈ 16) ಶಾಲೆ, ಪಿಯು ಕಾಲೇಜುಗಳಿಗೆ ರಜೆ

Prasthutha|

ಉಡುಪಿ: ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಉಡುಪಿ ಜಿಲ್ಲಾದ್ಯಂತ ಅಂಗನವಾಡಿ, ಶಾಲೆಗಳು ಮತ್ತು ಪಿಯುಸಿವರೆಗೆ ಜುಲೈ 16 (ಮಂಗಳವಾರ)ರಂದು ರಜೆ ಘೋಷಿಸಲಾಗಿದೆ.

- Advertisement -

ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ತಗ್ಗು ಪ್ರದೇಶಗಳು ಜಲಾವೃತ ವಾಗಿವೆ. ಇಂದು ಭಾರಿ ಮಳೆಯಾಗಿದ್ದು, ನಾಳೆಯೂ ಇದೇ ರೀತಿ ಮಳೆಯಾಗಲಿದ್ದು, ಉಡುಪಿ ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

- Advertisement -

ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವ ಹಿನ್ನೆಲೆ ನಾಳೆ (ಜುಲೈ 16) ಅಂಗನವಾಡಿ, ಶಾಲಾ- ಕಾಲೇಜುಗಳಿಗೆ ರಜೆ ಎಂದು ಅಧಿಕಾರಿಗಳು ಪ್ರಕಟಿಸಿದ್ದಾರೆ. ಕೊಡಗು ಜೆಲ್ಲೆಯಲ್ಲಿ ಪದವಿ ಕಾಲೇಜು ಸೇರಿ ಎಲ್ಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.



Join Whatsapp