Home ಟಾಪ್ ಸುದ್ದಿಗಳು ನಾಳೆಯ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ: ಸಿಎಂ

ನಾಳೆಯ ವಿಧಾನಮಂಡಲ ಕಲಾಪ ಬುಧವಾರಕ್ಕೆ ಮುಂದೂಡಿಕೆ: ಸಿಎಂ

ಬೆಂಗಳೂರು: ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಅವರ ನಿಧನದ ಹಿನ್ನಲೆಯಲ್ಲಿ ನಾಳೆಯ ವಿಧಾನಮಂಡಲದ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ.

ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಬಳಿಕ ಸಂತಾಪ ನಡಿಗಳನ್ನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರು ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದರು.

ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು ಎಂದು ಸಿಎಂ ಹೇಳಿದರು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು.

Join Whatsapp
Exit mobile version