ಮುಂಬೈ : ಟೂಲ್ ಕಿಟ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ನ್ಯಾಯವಾದಿ ನಿಕಿತಾ ಜೇಕಬ್ ಗೆ ಬಾಂಬೆ ಹೈಕೋರ್ಟ್ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಮಂಜೂರು ಮೂಡಿದೆ.
ಸಾಮಾಜಿಕ ಕಾರ್ಯಕರ್ತೆ, ನ್ಯಾಯವಾದಿ ನಿಕಿತಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ಬಾಂಬೆ ಹೈಕೋರ್ಟ್ ಮೂರು ವಾರಗಳ ಟ್ರಾನ್ಸಿಟ್ ಜಾಮೀನು ಜಾರಿ ಮಾಡಿದೆ. ಒಂದು ವೇಳೆ ಅವರು ಬಂಧಿಸಲ್ಪಟ್ಟರೆ, 25,000 ರೂ. ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತದ ಶ್ಯೂರಿಟಿ ಮೇರೆಗೆ ಬಿಡುಗಡೆ ಮಾಡಲಾಗುವುದು ಎಂದು ನ್ಯಾಯಾಲಯ ತಿಳಿಸಿದೆ.
ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿದ್ದ ಬೆಂಗಳೂರಿನ ಪರಿಸರ ಹೋರಾಟಗಾರ್ತಿ ದಿಶಾ ರವಿಯನ್ನು ದೆಹಲಿ ಪೊಲೀಸರು ಟೂಲ್ ಕಿಟ್ ಪ್ರಕರಣದಲ್ಲಿ ಬಂಧಿಸಿದ್ದರು. ಈ ವೇಳೆ ಅವರು ನಿಕಿತಾ ಮತ್ತು ಶಂತನು ಮುಲುಕ್ ಎಂಬವರ ವಿರುದ್ಧವೂ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ್ದರು.