ಹೊಸದಿಲ್ಲಿ : ತನ್ನ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ನೀಡದಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ಟೂಲ್ಕಿಟ್ ಪ್ರಕರಣದಲ್ಲಿ ಬಂಧಿತರಾಗಿರುವ ಪರಿಸರ ಕಾರ್ಯಕರ್ತೆ ದಿಶಾ ರವಿ ಗುರುವಾರ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆಗಾಗಿ ಕಾಯುತ್ತಿದ್ದೇನೆ. ಇದಾದ ಬಳಿಕ ತಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ದಿಶಾ ರವಿ ಅವರ ವಕೀಲ ಅಭಿನವ್ ಸೆಖ್ರಿ ಹೇಳಿದ್ದಾರೆ. ದಿಶಾ ಮತ್ತು ಮೂರನೇ ವ್ಯಕ್ತಿಗಳ ನಡುವೆ ನಡೆದ ವಾಟ್ಸ್ಆಯಪ್ ಚಾಟ್ ಹಾಗೂ ಖಾಸಗಿ ಚಾಟ್ನ ಮಾಹಿತಿಯನ್ನು ಮಾಧ್ಯಮಗಳು ಪ್ರಕಟಿಸುವುದನ್ನು ತಡೆಯಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.