ಟೂಲ್ ಕಿಟ್ ಪ್ರಕರಣ| ದಾಖಲೆಗಳನ್ನು ಮಾಧ್ಯಮಗಳಿಗೆ ನೀಡದಂತೆ ದೆಹಲಿ ನ್ಯಾಯಾಲಯದ ಮೊರೆ ಹೋದ ದಿಶಾ ರವಿ

Prasthutha|

- Advertisement -

ಹೊಸದಿಲ್ಲಿ : ತನ್ನ ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ನೀಡದಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಕೋರಿ ಟೂಲ್​ಕಿಟ್​​ ಪ್ರಕರಣದಲ್ಲಿ ಬಂಧಿತರಾಗಿರುವ ಪರಿಸರ ಕಾರ್ಯಕರ್ತೆ ದಿಶಾ ರವಿ ಗುರುವಾರ ದೆಹಲಿ ಹೈಕೋರ್ಟ್​ ಮೊರೆ ಹೋಗಿದ್ದಾರೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ನಲ್ಲಿ ವಿಚಾರಣೆಗಾಗಿ ಕಾಯುತ್ತಿದ್ದೇನೆ. ಇದಾದ ಬಳಿಕ ತಾನು ಈ ಬಗ್ಗೆ ಪ್ರತಿಕ್ರಿಯೆ ನೀಡುವುದಾಗಿ ದಿಶಾ ರವಿ ಅವರ ವಕೀಲ ಅಭಿನವ್​ ಸೆಖ್ರಿ ಹೇಳಿದ್ದಾರೆ. ದಿಶಾ ಮತ್ತು ಮೂರನೇ ವ್ಯಕ್ತಿಗಳ ನಡುವೆ ನಡೆದ ವಾಟ್ಸ್​ಆಯಪ್​ ಚಾಟ್​ ಹಾಗೂ ಖಾಸಗಿ ಚಾಟ್​ನ ಮಾಹಿತಿಯನ್ನು ಮಾಧ್ಯಮಗಳು ಪ್ರಕಟಿಸುವುದನ್ನು ತಡೆಯಬೇಕು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Join Whatsapp