Home ಟಾಪ್ ಸುದ್ದಿಗಳು ಬಿಜೆಪಿ-ಜೆಡಿಎಸ್ ನ ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆ

ಬಿಜೆಪಿ-ಜೆಡಿಎಸ್ ನ ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆ

ಮೈಸೂರು: ಮೈಸೂರಿನ ಜೆಡಿಎಸ್ ಮತ್ತು ಬಿಜೆಪಿಯ ಪ್ರಮುಖ ಮುಖಂಡರು ಇಂದು (ಮಾರ್ಚ್ 27) ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.


ಬಿಎಸ್ ಯಡಿಯೂರಪ್ಪನವರ ಆಪ್ತ ಹೆಚ್.ವಿ.ರಾಜೀವ್, ಬಿ.ಎಲ್.ಭೈರಪ್ಪ, ಕೆ.ವಿ.ಮಲ್ಲೇಶ್ ಅವರು ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾದರು. ಆದ್ರೆ, ಕಾಂಗ್ರೆಸ್ ಸೇರ್ಪಡೆ ಲಿಸ್ಟ್ನಲ್ಲಿದ್ದ ನಂದೇಶ್ ಅವರನ್ನು ಕೊನೆ ಕ್ಷಣದಲ್ಲಿ ವಿಜಯೇಂದ್ರ ಬದಲಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಕಾಂಗ್ರೆಸ್ ಸೇರ್ಪಡೆ ಬಳಿಕ ಮಾತನಾಡಿದ ಬಿಎಸ್ ಯಡಿಯೂರಪ್ಪನವರ ಆಪ್ತ ಹೆಚ್.ವಿ ರಾಜೀವ್ , ಮೂರು ದಶಕಗಳಿಂದ ನಾನು ಬಿಜೆಪಿಯಲ್ಲಿ ಕೆಲಸ ಮಾಡಿದೆ. ನಾನಿದ್ದ ಪಕ್ಷದಲ್ಲಿ ನಾನು ಮಾಡಿದ ಕೆಲಸಕ್ಕೆ ಗೌರವ ಸಿಗಲಿಲ್ಲ. ನಾನು ಕಾಂಗ್ರೆಸ್ ಸೇರಲಿಕ್ಕೆ ಪ್ರಮುಖ ಕಾರಣ ಸಿದ್ದರಾಮಯ್ಯನವರು. ಅವರ ಜನಪರ ಗ್ಯಾರಂಟಿಗಳನ್ನ ನಾನು ಮೆಚ್ಚಿ ಪಕ್ಷ ಸೇರಿದ್ದೇನೆ. ಚುನಾವಣೆಗೆ ಮುಂಚೆ ಪಂಚ ಗ್ಯಾರಂಟಿಗಳ ಟೀಕೆ ಮಾಡಿದ್ರು. ಆದ್ರೆ ಸಿದ್ದರಾಮಯ್ಯನವರು ಎಲ್ಲಾ ಗ್ಯಾರಂಟಿಗಳನ್ನ ಈಡೇರಿಸಿದ್ರು. ಕೊಟ್ಟ ಮಾತು ಉಳಿಸಿಕೊಳ್ಳುವ ಏಕೈಕ ವ್ಯಕ್ತಿ ಸಿದ್ದರಾಮಯ್ಯ. ಅವರು ನಮ್ಮ ಜಿಲ್ಲೆಯವರು ಎಂಬುದು ನಮಗೆ ಗೌರವ ಎಂದರು.

Join Whatsapp
Exit mobile version