ಕೋವಿಡ್ ಲಸಿಕೆ ಅಭಿವೃದ್ಧಿಪಡಿಸಿದ್ದ ವಿಜ್ಞಾನಿಯ ನಿಗೂಢ ಹತ್ಯೆ: ಆರೋಪಿ ಬಂಧನ

Prasthutha|

ಮಾಸ್ಕೊ: ರಷ್ಯಾದ ಕೋವಿಡ್ ಲಸಿಕೆ ಸ್ಪುಟ್ನಿಕ್ ವಿ ಅಭಿವೃದ್ಧಿಪಡಿಸುವಲ್ಲಿ ಬಹುಮುಖ್ಯ ಪಾತ್ರ ವಹಿಸಿದ್ದ ವಿಜ್ಞಾನಿ ಆಂಡ್ರೆ ಬೊಟಿಕೋವ್ ಅವರು ತಾನು ವಾಸಿಸುತ್ತಿದ್ದ ಅಪಾರ್ಟ್​​ಮೆಂಟ್​​ನಲ್ಲಿ ಹತ್ಯೆಯಾಗಿದ್ದಾರೆ.

- Advertisement -

ಬೆಲ್ಟ್​ನಿಂದ ಅವರ ಕತ್ತು ಹಿಸುಕಿ ಕೊಲೆ ಮಾಡಲಾಗಿದೆ ಎನ್ನಲಾಗಿದ್ದು, ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ರಷ್ಯಾ ಮಾಧ್ಯಮಗಳು ವರದಿ ಮಾಡಿವೆ.

47 ವರ್ಷ ವಯಸ್ಸಿನ ಬೊಟಿಕೋವ್ ಅವರು ಗಾಮೇಲೆಯಾ ನ್ಯಾಷನಲ್ ರಿಸರ್ಚ್ ಸೆಂಟರ್ ಫಾರ್ ಎಕಾಲಜಿ ಆ್ಯಂಡ್ ಮ್ಯಾಥಮೆಟಿಕ್ಸ್​​ನ ಹಿರಿಯ ಸಂಶೋಧಕರಾಗಿದ್ದರು.

- Advertisement -

ಕೋವಿಡ್ ಲಸಿಕೆ ಅಭಿವೃದ್ಧಿಪಡಿಸುವಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಕ್ಕಾಗಿ ಆಂಡ್ರೆ ಬೊಟಿಕೋವ್ ಅವರನ್ನು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ 2021ರಲ್ಲಿ ‘ಆರ್ಡರ್ ಆಫ್​ ಮೆರಿಟ್ ಫಾರ್​ ದಿ ಫಾದರ್​​​ಲ್ಯಾಂಡ್’ ಪ್ರಶಸ್ತಿ ನೀಡಿ ಗೌರವಿಸಿದ್ದರು. 2020ರಲ್ಲಿ ರಷ್ಯಾದ 18 ವಿಜ್ಞಾನಿಗಳ ತಂಡ ಸ್ಪುಟ್ನಿಕ್ ವಿ ಲಸಿಕೆ ಅಭಿವೃದ್ಧಿಪಡಿಸಿತ್ತು. ಈ ತಂಡದಲ್ಲಿ ಬೊಟಿಕೋವ್ ಪ್ರಮುಖ ಪಾತ್ರ ವಹಿಸಿದ್ದರು.

Join Whatsapp