ಧಾರಾಕಾರ ಮಳೆ: ಕೊಡಗಿನಲ್ಲಿ ಭೂ ಕುಸಿತ ಭೀತಿ

Prasthutha|

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಕಾವೇರಿ ನದಿಯ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹಗೊಂಡಿದೆ. ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.

- Advertisement -


ಈ ಮಧ್ಯೆ ಮಡಿಕೇರಿ- ಮಂಗಳೂರು ಮಾರ್ಗದಲ್ಲಿ ಸಣ್ಣ ಪ್ರಮಾಣದ ಭೂಕುಸಿತ ಉಂಟಾಗಿದ್ದು, 6ಕ್ಕೂ ಅಧಿಕ ಮನೆಗಳ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಲು ಸೂಚಿಸಲಾಗಿದೆ.
ಸ್ಥಳಕ್ಕೆ ತಹಶೀಲ್ದಾರ್ ಮಹೇಶ್ ಭೇಟಿ ನೀಡಿ ಪರಿಶೀಲಿಸಿದ್ದು, ಸ್ಥಳದಲ್ಲಿ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

Join Whatsapp