ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ; ಜನ ಜೀವನ ಅಸ್ತವ್ಯಸ್ತ

Prasthutha|

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿಇಂದು ಮುಂಜಾನೆ ಸುರಿದ  ಭಾರಿ ಗಾಳಿ ಸಹಿತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,   ಹಲವು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ವರದಿಗಳು ತಿಳಿಸಿವೆ.

- Advertisement -

ದೆಹಲಿಯಲ್ಲಿ ತಾಪಮಾನ ಮತ್ತಷ್ಟು ಇಳಿತವುಂಟಾಗಿದ್ದು, ತೀಕ್ಷ್ಣ ಉಷ್ಣಮಾರುತದಿಂದ ಕಂಗೆಟ್ಟಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ. ಮುಂಜಾನೆ ವೇಳೆ ವಾಹನ ಸಂಚಾರ ವ್ಯತ್ಯಯಕ್ಕೂ ಕಾರಣವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಪ್ರತಿಕೂಲ ಹವಾಮಾನದಿಂದಾಗಿ ವಾಯು ಸಂಚಾರದಲ್ಲಿ  ವ್ಯತ್ಯಯವುಂಟಾಗಿದೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.



Join Whatsapp