Home ಟಾಪ್ ಸುದ್ದಿಗಳು ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ; ಜನ ಜೀವನ ಅಸ್ತವ್ಯಸ್ತ

ರಾಷ್ಟ್ರ ರಾಜಧಾನಿಯಲ್ಲಿ ಧಾರಾಕಾರ ಮಳೆ; ಜನ ಜೀವನ ಅಸ್ತವ್ಯಸ್ತ

ಹೊಸದಿಲ್ಲಿ: ರಾಷ್ಟ್ರ ರಾಜಧಾನಿಯಲ್ಲಿಇಂದು ಮುಂಜಾನೆ ಸುರಿದ  ಭಾರಿ ಗಾಳಿ ಸಹಿತ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು,   ಹಲವು ಕಡೆಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ ಎಂದು ವರದಿಗಳು ತಿಳಿಸಿವೆ.

ದೆಹಲಿಯಲ್ಲಿ ತಾಪಮಾನ ಮತ್ತಷ್ಟು ಇಳಿತವುಂಟಾಗಿದ್ದು, ತೀಕ್ಷ್ಣ ಉಷ್ಣಮಾರುತದಿಂದ ಕಂಗೆಟ್ಟಿದ್ದ ಜನರು ನಿಟ್ಟುಸಿರು ಬಿಡುವಂತಾಗಿದೆ. ಮುಂಜಾನೆ ವೇಳೆ ವಾಹನ ಸಂಚಾರ ವ್ಯತ್ಯಯಕ್ಕೂ ಕಾರಣವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಪ್ರತಿಕೂಲ ಹವಾಮಾನದಿಂದಾಗಿ ವಾಯು ಸಂಚಾರದಲ್ಲಿ  ವ್ಯತ್ಯಯವುಂಟಾಗಿದೆ ಎಂದು ವಿಮಾನಯಾನ ಸಂಸ್ಥೆಗಳು ತಿಳಿಸಿವೆ.

Join Whatsapp
Exit mobile version