ಮೈಸೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರವರ ಪ್ರತಿಮೆ ಭಗ್ನಗೊಳಿಸಿ, ಪುಂಡಾಟಿಕೆ ನಡೆಸಿದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಗಡಿ ಜಿಲ್ಲೆಯಲ್ಲಿ ಕನ್ನಡ ಹಾಗೂ ಮರಾಠಿ ಮಾತನಾಡುವ ಜನತೆ ಅತ್ಯಂತ ಅನ್ಯೋನ್ಯತೆ, ಪ್ರೀತಿ ಹಾಗೂ ಸಾಮರಸ್ಯದಿಂದ ಇದ್ದಾರೆ. ರಾಯಣ್ಣ ಹಾಗೂ ಶಿವಾಜಿ ಯವರಂಥ ಮಹನೀಯರ ಬಗ್ಗೆ ಎಳ್ಳಷ್ಟೂ ಗೌರವ ವಿಲ್ಲದ ದುಷ್ಕರ್ಮಿಗಳ ಉದ್ದೇಶ ಸಮಾಜದಲ್ಲಿನ ನೆಮ್ಮದಿಗೆ ಭಂಗ ತರುವುದಾಗಿದೆ. ಈ ನಿಟ್ಟಿನಲ್ಲಿ ಅಂತಹವರನ್ನು ಗುರುತಿಸಿ ಬಗ್ಗು ಬಡಿಯಲಾಗುವುದು ಎಂದು ತಿಳಿಸಿದ್ದರು.
ಬೆಳಗಾವಿ ಹಾಗೂ ಬೆಂಗಳೂರಿನ ಘಟನೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಶಾಂತಿ ಹಾಗೂ ಸುವ್ಯವಸ್ತೆ ಕಾಪಾಡಿಕೊಳ್ಳಲು ಎಲ್ಲಾ ಅಗತ್ಯ ಕ್ರಮಗಳನ್ನು, ತೆಗೆದುಕೊಳ್ಳಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶಿಸಿದ್ದೇನೆ ಎಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.