ಅಮರಾವತಿ: ಆಂಧ್ರಪ್ರದೇಶದ ಖಾಸಗಿ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿಗೆ ಹಾಸ್ಟೆಲ್ ನಲ್ಲಿ ಸಹಪಾಠಿಗಳು ಚಿತ್ರಹಿಂಸೆ ನೀಡಿ ಹಲ್ಲೆ ನಡೆಸಿದ ಬಗ್ಗೆ ವಿಡಿಯೋ ವೈರಲ್ ಆಗಿದೆ.
ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿರುವ ಖಾಸಗಿ ಇಂಜಿನಿಯರಿಂಗ್ ಹಾಸ್ಟೆಲ್ ನ ರೂಮಿನಲ್ಲಿ ವಿದ್ಯಾರ್ಥಿಗಳು ಸಹಪಾಠಿಯನ್ನು ಥಳಿಸಿ ಇಸ್ತ್ರಿ ಪೆಟ್ಟಿಗೆಯಿಂದ ಮೈ ಸುಟ್ಟಿದ್ದಾರೆ.ಈ ವಿಷಯ ತಿಳಿಯುತ್ತಿದ್ದಂತೆ ನಾಲ್ಕು ಜನ ವಿದ್ಯಾರ್ಥಿಗಳನ್ನು ಬಂಧಿಸಿಸಲಾಗಿದೆ.
ವಿದ್ಯಾರ್ಥಿ ತನ್ನನ್ನು ಬಿಡುವಂತೆ ಕೈ ಮುಗಿದು ಬೇಡಿಕೊಂಡರು, ಶರ್ಟ್ ತೆಗೆಯಲು ಹೇಳಿ ಕೋಲಿನಿಂದ ರೂಮಿನಲ್ಲಿರುವ ಯುವಕನನ್ನು ಮನಬಂದಂತೆ ಥಳಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ರ್ಯಾಂಗಿಂಗ್ ಗೆ ಒಳಗಾದ ಯುವಕನನ್ನು ಅಂಕಿತ್ ಎಂದು ಗುರುತಿಸಲಾಗಿದೆ. ಎಲ್ಲಾ ಆರೋಪಿಗಳು ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್ ಓದುತ್ತಿದ್ದಾರೆ.ಥಳಿತಕ್ಕೊಳಗಾದ ವಿದ್ಯಾರ್ಥಿ ಅಂಕಿತ್ ಗೆ ಗಂಭೀರ ಗಾಯಗಾಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ಕುರಿತು ದುಷ್ಕೃತ್ಯ ಮೆರೆದ ಸಹಪಾಠಿ ವಿದ್ಯಾರ್ಥಿಗಳನ್ನು ಬಂಧಿಸಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.