ಸೆಪ್ಟೆಂಬರ್ ತಿಂಗಳಲ್ಲಿ ಬ್ಯಾಂಕಿಗೆ ಒಟ್ಟು 16 ದಿನ ರಜೆ!

Prasthutha|


ನವದೆಹಲಿ: ಸೆಪ್ಟೆಂಬರ್ ಪ್ರಾರಂಭವಾಗಲು ಇನ್ನು ಬೆರಳೆಣಿಕೆ ದಿನಗಳಷ್ಟೇ ಬಾಕಿ ಉಳಿದಿವೆ. ಪ್ರತಿ ಹೊಸ ತಿಂಗಳು ಪ್ರಾರಂಭವಾಗುವ ಮುನ್ನ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಬ್ಯಾಂಕ್ ಗಳ ರಜಾಪಟ್ಟಿ ಬಿಡುಗಡೆ ಮಾಡುತ್ತದೆ. ಆರ್ ಬಿಐ ಸೆಪ್ಟೆಂಬರ್ ತಿಂಗಳ ರಜಾಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 16 ದಿನಗಳ ಕಾಲ ರಜೆಯಿದೆ.
ಸೆಪ್ಟೆಂಬರ್ ತಿಂಗಳಲ್ಲಿ ಸಾಲು ಸಾಲು ಹಬ್ಬಗಳಿದ್ದು, ಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ ಹಾಗೂ ಈದ್ ಇ ಮಿಲಾದ್ ಸೇರಿದಂತೆ ಅನೇಕ ಹಬ್ಬಗಳಿವೆ. ಈ ಹಿನ್ನೆಲೆಯಲ್ಲಿ ಬ್ಯಾಂಕ್ ಗಳಿಗೆ ಸಾಲು ಸಾಲು ರಜೆಗಳಿವೆ. ವಾರಂತ್ಯದ ರಜೆಗಳು ಸೇರಿದಂತೆ ಸೆಪ್ಟೆಂಬರ್ ತಿಂಗಳಲ್ಲಿ ಒಟ್ಟು 16 ದಿನಗಳ ಕಾಲ ಬ್ಯಾಂಕ್ ಗಳು ಕಾರ್ಯನಿರ್ವಹಿಸೋದಿಲ್ಲ.

- Advertisement -

ಸೆಪ್ಟೆಂಬರ್ ತಿಂಗಳಲ್ಲಿ ಬ್ಯಾಂಕ್ ಗೆ ಭೇಟಿ ನೀಡಿ ಮಾಡಲೇಬೇಕಾದ ಕೆಲಸವಿದ್ದರೆ ರಜಾಪಟ್ಟಿ ನೋಡಿಕೊಂಡು ಹೋಗೋದು ಉತ್ತಮ. ಇನ್ನು 2 ಸಾವಿರ ರೂ. ಮುಖಬೆಲೆಯ ನೋಟುಗಳ ವಿನಿಮಯಕ್ಕೆ ಸೆಪ್ಟೆಂಬರ್ 30ರ ತನಕ ಮಾತ್ರ ಕಾಲಾವಕಾಶ ನೀಡಲಾಗಿದೆ. ಹೀಗಾಗಿ 2 ಸಾವಿರ ರೂಪಾಯಿ ನೋಟುಗಳನ್ನು ಖಾತೆಗೆ ಜಮೆ ಮಾಡಲು ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ವಿನಿಮಯ ಮಾಡಿಕೊಳ್ಳಲು ಬ್ಯಾಂಕಿಗೆ ಹೋಗಬೇಕಾದ ಅನಿವಾರ್ಯತೆಯಿದ್ರೆ ರಜಾಪಟ್ಟಿ ನೋಡಿ ಪ್ಲ್ಯಾನ್ ಮಾಡಿ.



Join Whatsapp