ಕೋವಿಡ್ ನಿಗ್ರಹಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ‘ಟಫ್ ರೂಲ್ಸ್’ ಜಾರಿ : ಜಿಲ್ಲಾಧಿಕಾರಿ

Prasthutha|

►ಅಗತ್ಯ ವಸ್ತುಗಳ ಖರೀದಿ ಸಮಯದಲ್ಲಿ ಬದಲಾವಣೆ

- Advertisement -

ಮಂಗಳೂರು : ಜಿಲ್ಲಾಧಿಕಾರಿಗಳಾದ ಡಾ ಕೆ ವಿ ರಾಜೇಂದ್ರ ಅವರು ನಾಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಗ್ರಹಕ್ಕಾಗಿ ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದಾರೆ.  ಇದು ನಾಳೆ ಬೆಳಗ್ಗೆ 6 ಗಂಟೆಯಿಂದ ಜಾರಿಗೆ ಬರಲಿದ್ದು,  ಅದರ ಪ್ರಕಾರ ಅಗತ್ಯ ವಸ್ತುಗಳ ಖರೀದಿಗೆ ಈಗ ಇರುವಂತಹಾ ಸಮಯವನ್ನು ಮರು ನಿಗದಿಪಡಿಸಲಾಗಿದೆ. ನಾಳೆಯಿಂದ ಬೆಳಗ್ಗೆ 6 ರಿಂದ 9 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. ಮೆಡಿಕಲ್ ಗೆ ಹೋಗುವವರು ತಮ್ಮ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಜ್ ಮಾಡಲಾಗುತ್ತದೆ. ಜನರ ಅನಗತ್ಯ ಓಡಾಟಕ್ಕೆ ಖಾಕಿಯಿಂದ ಕಠಿಣ ಕ್ರಮಕ್ಕೆ ಆದೇಶ ಹೊರಡಿಸಲಾಗಿದೆ.

ಮೇ.15 ಬಳಿಕ ಯಾವ ಕಾರ್ಯಕ್ರಮಗಳಿಗೂ ಜಿಲ್ಲೆಯಲ್ಲಿ ಅವಕಾಶ ನೀಡಲಾಗುವುದಿಲ್ಲ. ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವ ಕಾರ್ಯಕ್ರಮ ಮಾಡುವಂತಿಲ್ಲ. ಮೇ.15 ರ ಮೇಲೆ ಅನುಮತಿ ನೀಡಿರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲು ಉದ್ದೇಶಿಸಲಾಗಿದ್ದು, ಕಾರ್ಯಕ್ರಮ ಇದೀಗಾಗಲೇ ನಿಗದಿಪಡಿಸಿದವರು ಅದನ್ನು ಮುಂದೂಡುವ ಕುರಿತಂತೆ ಅವರ ಮನವೊಲಿಸಲಾಗುವುದು ಎಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಇಂದು ನಡೆದ ಸಭೆಯ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗಿದೆ.

Join Whatsapp