ಬೆಂಗಳೂರು: ನಟ ಯಶ್ ಜನ್ಮದಿನದ ಪ್ರಯುಕ್ತ ಇಂದು ‘ಟಾಕ್ಸಿಕ್’ ಚಿತ್ರದ ಟೈಟಲ್ ಟೀಸರ್ (ಬರ್ತಡೇ ಪೀಕ್) ಬಿಡುಗಡೆಯಾಗಿದೆ.
59 ಸೆಕೆಂಡುಗಳ ಟೀಸರ್ ಅನ್ನು ಕೆವಿಎನ್ ಪ್ರೊಡಕ್ಷನ್ಸ್ ತನ್ನ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆ ಮಾಡಿದೆ. ಅಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಈ ಮೂಲಕ ನಾಯಕನ ಪಾತ್ರವನ್ನು ಚಿತ್ರತಂಡ ಪರಿಚಯಿಸಿದೆ.
ಗ್ಯಾಂಗ್ ಸ್ಟರ್ ಪಾತ್ರದಂತೆ ತೋರುವ ಯಶ್ ದೊಡ್ಡ ಪಾರ್ಟಿ ಒಂದಕ್ಕೆ ಪ್ರವೇಶ ಮಾಡಿ ಖಡಕ್ ಲುಕ್ನಲ್ಲಿ ಮಿಂಚಿದ್ದಾರೆ. ಹಿನ್ನೆಲೆ ಸಂಗೀತವೂ ಗಮನ ಸೆಳೆಯುವಂತಿದೆ.
ರಾಕಿಂಗ್ ಸ್ಟಾರ್ ಯಶ್ ಅವರ ಜನ್ಮದಿನದಂದು ವಿಶೇಷ ಉಡುಗೊರೆ ಕೊಡೋದಾಗಿ ‘ಟಾಕ್ಸಿಕ್’ ತಂಡ ಈ ಮೊದಲೇ ಘೋಷಣೆ ಮಾಡಿತ್ತು. ಪೋಸ್ಟರ್ ರಿಲೀಸ್ ಮಾಡುವ ಮೂಲಕ ಈ ಬಗ್ಗೆ ಮಾಹಿತಿ ನೀಡಲಾಗಿತ್ತು. ಅಂತೆಯೇ ಇಂದು (ಜನವರಿ 8) ಬೆಳಿಗ್ಗೆ 10 ಗಂಟೆ 25 ನಿಮಿಷಕ್ಕೆ ‘ಟಾಕ್ಸಿಕ್’ ಗ್ಲಿಂಪ್ಸ್ ರಿಲೀಸ್ ಆಗಿದೆ. ಯಶ್ ಅವರ ಚಿತ್ರದ ಮೇಲಿರುವ ನಿರೀಕ್ಷೆ ಈಗ ದ್ವಿಗುಣವಾಗಿದೆ. ಯಶ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.