ಟ್ರ್ಯಾಕ್ಟರ್ ಚಾಲನೆ ವೇಳೆ ಕಾಡಾನೆ ಹಠಾತ್ ದಾಳಿ: ಚಾಲಕ ಸಾವು

Prasthutha|

ಮಡಿಕೇರಿ: ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದಾಗ ಚಾಲಕನ ಮೇಲೆ ಕಾಡಾನೆ ದಾಳಿ ನಡೆಸಿದ್ದು ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅರೆಕಾಡು ಗ್ರಾಮದಲ್ಲಿ ನಡೆದಿದೆ.

- Advertisement -

ಮೃತನನ್ನು ದೇವಪ್ಪ (79) ಎಂದು ಗುರುತಿಸಲಾಗಿದೆ. ಮಧ್ಯಾಹ್ನದ ವೇಳೆ ದೇವಪ್ಪ ಕೆಲಸದ ಮೇಲೆ ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಅರೆಕಾಡು ಗ್ರಾಮದ ಬಳಿ ತೆರಳಿದ್ದರು. ಟ್ರ್ಯಾಕ್ಟರ್ ಚಾಲನೆ ಮಾಡುತ್ತಿದ್ದ ವೇಳೆಯೇ ಕಾಡಾನೆ ಹಠಾತ್ ದಾಳಿ ನಡೆಸಿದೆ ಎನ್ನಲಾಗಿದೆ.

ಅರಣ್ಯ ಇಲಾಖೆಯ ಸಿಬ್ಬಂದಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡದೆ ಕಾರ್ಯಾಚರಣೆ ನಡೆಸಿದ್ದಾರೆ. ಇದರಿಂದಾಗಿ ಏಕಾಏಕಿ ಟ್ರ್ಯಾಕ್ಟರ್ ಚಾಲಕನ ಮೇಲೆ ಒಂಟಿ ಸಲಗ ದಾಳಿ ನಡೆಸಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

Join Whatsapp