ಉಡುಪಿ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮುಸ್ಲಿಮರು ವ್ಯಾಪಾರ ನಡೆಸಲು ಹಿಂದೂ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿರುವುದು ಖಂಡನೀಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಎಲ್ಲರೂ ಸ್ವತಂತ್ರರು, ಯಾರು ಯಾರಿಗೂ ಬೆದರಿಕೆ ಹಾಕುವಂತಿಲ್ಲ. ವ್ಯಾಪಾರ ವಹಿವಾಟು ನಡೆಸಲು ಬೆದರಿಕೆ ಹಾಕುವವರ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದರು.
ಅಲ್ಲದೆ ಮುಸ್ಲಿಮರ ವ್ಯಾಪಾರಕ್ಕೆ ಬಹಿಷ್ಕಾರ ಹಾಕಲು ಕಾನೂನಿನಲ್ಲಿ ಅವಕಾಶ ಇಲ್ಲ. ಕಾನೂನಿಗೆ ವಿರುದ್ಧವಾದ ನಡವಳಿಕೆ ಸರಿಯಲ್ಲ. ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು ಎಂದು ತಿಳಿಸಿದರು.