ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Prasthutha|

ಶಿವಮೊಗ್ಗ: ಜಿಲ್ಲೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿಷೇಧ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -

ಶಿವಮೊಗ್ಗ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ ಮಳೆಯಿಂದಾಗಿ ಮತ್ತು ಭಾರೀ ವಾಹನಗಳ ಓಡಾಟದಿಂದಾಗಿ ಅಲ್ಲಲ್ಲಿ ರಸ್ತೆ ಬದಿಯಲ್ಲಿ ಭೂಕುಸಿತ ಆಗುವ ಸಂಭವ ಇರುವುದರಿಂದ ದಿನಾಂಕ 27-06-2024ರ ಇಂದಿನಿಂದ ದಿನಾಂಕ 15-09-2024ರವರೆಗೆ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಅಗುಂಬೆ ಘಾಟಿ ರಸ್ತೆಯಲ್ಲಿ ಭಾರೀ ವಾಹನ ಸಂಚಾರ ನಿಷೇಧಿಸಿರುವುದರಿಂದ ತಿರ್ಥಹಳ್ಳಿ ಟು ಉಡುಪಿಗೆ ತೆರಳುವಂತ ಭಾರೀ ವಾಹನಗಳು ತೀರ್ಥಹಳ್ಳಿ, ಮಾಸ್ತಿಕಟ್ಟೆ, ಸಿದ್ಧಾಪುರ, ಕುಂದಾಪುರ, ಉಡುಪಿಗೆ ತೆರಳುವುದು. ಉಡುಪಿಯಿಂದ ತೀರ್ಥಹಳ್ಳಿಗೆ ಉಡುಪಿ, ಕುಂದಾಪುರ, ಸಿದ್ಧಾಪುರ, ಮಾಸ್ತಿಕಟ್ಟೆ, ತೀರ್ಥಹಳ್ಳಿಗೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವಂತೆ ಅವರು ತಿಳಿಸಿದ್ದಾರೆ.

Join Whatsapp
Exit mobile version