ಹೆದ್ದಾರಿ ದುರಸ್ತಿ ಹಿನ್ನೆಲೆ: ಬೆಂಗಳೂರು – ಮೈಸೂರು ನಡುವೆ ವಾಹನ ಸಂಚಾರಕ್ಕೆ ಅಡಚಣೆ

Prasthutha|

ರಾಮನಗರ: ಬೆಂಗಳೂರು – ಮೈಸೂರು ಹೆದ್ದಾರಿಯಲ್ಲಿ ದುರಸ್ತಿ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಬದಲಿ ಮಾರ್ಗದಲ್ಲಿ ಸಂಚರಿಸುವಂತೆ ಪೊಲೀಸ್ ಇಲಾಖೆ ಸೂಚನೆ ನೀಡಿದೆ.

- Advertisement -


ಬೆಂಗಳೂರು ನಗರದ ವ್ಯಾಪ್ತಿಗೆ ಒಳಪಡುವ ಕುಂಬಗಳೂಡು, ಕ್ರೈಸ್ಟ್ ಕಾಲೇಜು ಸುತ್ತ ಮುತ್ತಲ ಪ್ರದೇಶದಲ್ಲಿ ನೀರು ಹೆದ್ದಾರಿಗೆ ನುಗ್ಗಿದ್ದು, ಶನಿವಾರ ಬೆಳಿಗ್ಗೆ ಬೆಂಗಳೂರು – ಮೈಸೂರು ನಡುವಿನ ವಾಹನ ಸವಾರರು ಪರದಾಡಿದರು.
ಮೈಸೂರಿನಿಂದ ಬೆಂಗಳೂರಿಗೆ ಹಾಗೂ ಬೆಂಗಳೂರಿನಿಂದ ಮೈಸೂರಿಗೆ ತೆರಳು ಎರಡು ಬದಲಿ ಮಾರ್ಗಗಳನ್ನು ಪೊಲೀಸರು ಸೂಚಿಸಿದ್ದಾರೆ. ಬೆಂಗಳೂರು – ಕನಕಪುರ ಮಾರ್ಗವಾಗಿ ಮೈಸೂರಿಗೆ ಹಾಗು ಬೆಂಗಳೂರು – ಕುಣಿಗಲ್ ಮಾರ್ಗವಾಗಿ ಮೈಸೂರಿಗೆ ತೆರಳಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Join Whatsapp