ಬೆಂಗಳೂರು: ನಗರದ ರಸ್ತೆಯಲ್ಲಿ ಎಮ್ಮೆಗಳು ತೊಂದರೆ ಕೊಡುತ್ತಿವೆ ಎಂದು ಸಾಫ್ಟ್‌ವೇರ್ ಇಂಜಿನಿಯರ್ ಗಳು ದೂರು ನೀಡಿದ ಘಟನೆ ನಡೆದಿದೆ.
ಐಟಿ-ಬಿಟಿ ಕಂಪನಿ ಉದ್ಯೋಗಿಗಳು ಬೆಳಿಗ್ಗೆ ಆಫೀಸ್ಗೆ ಹೋಗುವಾಗ ನಗರದ ಕಸವನಹಳ್ಳಿ ರಸ್ತೆಯಲ್ಲಿ ಪ್ರತಿನಿತ್ಯ ಎಮ್ಮೆಗಳು ಸರತಿ ಸಾಲಿನಲ್ಲಿ ಸಾಗುತ್ತವೆ. ಇದರಿಂದ ದಿನನಿತ್ಯ 45 ನಿಮಿಷ ಟ್ರಾಫಿಕ್ ಜಾಮ್ ಆಗುತ್ತಿದ್ದು, ಟೆಕ್ಕಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಈ ಹಿನ್ನೆಲೆ ಬಹುರಾಷ್ಟ್ರೀಯ ಕಂಪನಿಯ ಟೆಕ್ಕಿಗಳು ಕಳೆದ 6-7 ತಿಂಗಳಿಂದ ಎಮ್ಮೆ ಸಮ್ಯಸೆಯಿಂದ ಟ್ರಾಫಿಕ್ ಜಾಮ್ ಆಗಿ ಆಫೀಸ್ಗೆ ನಿತ್ಯ ತಡವಾಗುತ್ತಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳಿ ಎಂದು ಟೀಟ್ವರ್ನಲ್ಲಿ ಪಶುಸಂಗೋಪನಾ ಇಲಾಖೆ, ಸಂಚಾರ ಪೊಲೀಸ್, ಬಿಬಿಎಂಪಿಗೆ ಟ್ಯಾಗ್ ಮಾಡಿ ದೂರು ನೀಡಿದ್ದಾರೆ.