ಇಂದಿನಿಂದ ಬೆಂಗಳೂರಿನಲ್ಲಿ ವಿಪಕ್ಷಗಳ ಸಭೆ: ಹಲವೆಡೆ ರಸ್ತೆ ಮಾರ್ಗ ಬದಲಾವಣೆ

Prasthutha|

ಬೆಂಗಳೂರು: ಬಿಜೆಪಿಯನ್ನು ಲೋಕಸಭೆ ಚುನಾವಣೆಯಲ್ಲಿ ಸೋಲಿಸಲು ಒಗ್ಗೂಡಿರುವ ವಿಪಕ್ಷಗಳ ಸಭೆ ಇಂದಿನಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಈ ನಡುವೆ ಕರ್ನಾಟಕ ವಿಧಾನಸಭೆ ಅಧಿನವೇಶನವೂ ನಡೆಯಲಿದೆ. ಹೀಗಾಗಿ ಬೆಂಗಳೂರಿನಲ್ಲಿ ಕೆಲವು ಕಡೆಗಳಲ್ಲಿ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.

- Advertisement -

ವಿಧಾನಸೌಧದಲ್ಲಿ ಅಧಿವೇಶನ ಹಾಗೂ ತಾಜ್ ವೆಸ್ಟೆಂಡ್​ ಹೊಟೇಲ್​ನಲ್ಲಿ ಲೋಕಸಭಾ ವಿರೋಧ ಪಕ್ಷಗಳ ಸಭೆ ನಡೆಯಲಿದೆ. ಈ ಹಿನ್ನೆಲೆ, ಬಿ.ಆರ್ ಅಂಬೇಡ್ಕರ್ ರಸ್ತೆ, ಕಬ್ಬನ್ ರಸ್ತೆ, ಪ್ಯಾಲೆಸ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಶೇಷಾದ್ರಿ ರಸ್ತೆಗಳಲ್ಲಿ ವಾಹನ ಸವಾರರು ಸಂಚರಿಸದೆ ಪರ್ಯಾಯ ಮಾರ್ಗಗಳನ್ನ ಬಳಸುವಂತೆ ನಗರ ಸಂಚಾರಿ ಪೊಲೀಸರು ಮನವಿ ಮಾಡಿದ್ದಾರೆ.

ಅಷ್ಟೇ ಅಲ್ಲದೆ, ಕೆಲವು ಕಡೆಗಳಲ್ಲಿ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ. ಅಂಬೇಡ್ಕರ್ ರಸ್ತೆ, ರಾಜಭವನ ರಸ್ತೆ, ಬಳ್ಳಾರಿ ರಸ್ತೆ ಹಾಗೂ ರೇಸ್ ಕೋರ್ಸ್ ರಸ್ತೆಗಳಲ್ಲಿ ವಾಹನ ಪಾರ್ಕಿಂಗ್​ಗೆ ನಿಷೇಧ ಹೇರಲಾಗಿದೆ.

- Advertisement -

ಲೊಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಉಳಿದಿದ್ದು, ಬಿಜೆಪಿಯನ್ನು ಮಣಿಸಲು ವಿರೋಧ ಪಕ್ಷಗಳು ಒಂದಾಗಿವೆ. ಇದಕ್ಕಾಗಿ ವಿವಿಧ ತಂತ್ರಗಳನ್ನು ಹೆಣೆಯಲು ಆರಂಭಿಸಿವೆ. ಈ ಸಂಬಂಧ ಜುಲೈ 18 ರಂದು ಬೆಂಗಳೂರಿನಲ್ಲಿ ವಿರೋಧ ಪಕ್ಷಗಳು ಸಭೆ ನಡೆಸಲಿವೆ. ಇದು ಎರಡನೇ ಸಭೆಯಾಗಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟದ ಮೊದಲ‌ ಸಭೆಯು ಜೂನ್ ಅಂತ್ಯದಲ್ಲಿ ಬಿಹಾರದ ಪಾಟ್ನಾದಲ್ಲಿ ನಡೆದಿತ್ತು. ಈ ಸಭೆಯಲ್ಲಿ 16 ಪಕ್ಷಗಳ ನಾಯಕರು ಭಾಗಿಯಾಗಿದ್ದರು.

ಆದರೆ ಮೈತ್ರಿ ಕುರಿತು ಒಪ್ಪಂದಕ್ಕೆ ಬರಲು ಸಭೆ ವಿಫಲವಾದ ಕಾರಣ, ವಿರೋಧ ಪಕ್ಷಗಳು ಮತ್ತೊಮ್ಮೆ ಸಭೆ ನಡೆಸಲು ನಿರ್ಧರಿಸಿವೆ. ಆರಂಭದಲ್ಲಿ ಜುಲೈ 12 ಅಥವಾ 14 ರಂದು ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಅಂತಿಮವಾಗಿ ಜುಲೈ 18 ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ಚರ್ಚೆಯ ನೇತೃತ್ವದ ಜವಾಬ್ದಾರಿಯನ್ನು ಕಾಂಗ್ರೆಸ್‌ಗೆ ವಹಿಸಲಾಗಿದೆ.

Join Whatsapp