ರೈಲಿನಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

Prasthutha|

ಮಧುರೈ: ಉತ್ತರ ಪ್ರದೇಶ ರಾಜ್ಯದ ಲಖನೌದಿಂದ ರಾಮೇಶ್ವರಂಗೆ ಬರುತ್ತಿದ್ದ ಪ್ರವಾಸಿ ರೈಲಿನ ಖಾಸಗಿ ಕೋಚ್ ಗೆ, ಮಧುರೈ ಸಮೀಪ ಬೆಂಕಿ ತಗುಲಿದೆ. ಈ ಅಗ್ನಿ ಅವಘಡದ ವೇಳೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

- Advertisement -


ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.



Join Whatsapp