Home ಟಾಪ್ ಸುದ್ದಿಗಳು ರೈಲಿನಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ರೈಲಿನಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 9ಕ್ಕೆ ಏರಿಕೆ

ಮಧುರೈ: ಉತ್ತರ ಪ್ರದೇಶ ರಾಜ್ಯದ ಲಖನೌದಿಂದ ರಾಮೇಶ್ವರಂಗೆ ಬರುತ್ತಿದ್ದ ಪ್ರವಾಸಿ ರೈಲಿನ ಖಾಸಗಿ ಕೋಚ್ ಗೆ, ಮಧುರೈ ಸಮೀಪ ಬೆಂಕಿ ತಗುಲಿದೆ. ಈ ಅಗ್ನಿ ಅವಘಡದ ವೇಳೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ 9 ಜನರು ಸಾವನ್ನಪ್ಪಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.


ದುರ್ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.


ಗಂಭೀರವಾಗಿ ಗಾಯಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಪೊಲೀಸರು ಮತ್ತು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version