ಚೆನ್ನೈ: ಶಾಲಾ ಬಸ್ಸಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯ ಸೆಮ್ಮಂಗುಪ್ಪಂನಲ್ಲಿ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ 10 ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ
ಶಾಲಾ ವ್ಯಾನ್ ರೈಲು ಹಳಿ ದಾಟಲು ಪ್ರಯತ್ನಿಸುತ್ತಿದ್ದಾಗ ಹಾದುಹೋಗುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಕಡಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಬೆಳಿಗ್ಗೆ ಕಡಲೂರಿನ ಚೆಮ್ಮಂಗುಪ್ಪಂ ಬಳಿ ಮಕ್ಕಳನ್ನು ಹೊತ್ತ ಶಾಲಾ ವ್ಯಾನ್ ಪ್ರಯಾಣಿಸುತ್ತಿತ್ತು. ಶಾಲಾ ವ್ಯಾನ್ ಚಾಲಕ ಚೆಮ್ಮಂಗುಪ್ಪಂ ಬಳಿ ರೈಲ್ವೆ ಗೇಟ್ ದಾಟಲು ಪ್ರಯತ್ನಿಸಿದ್ದ. ಆ ಸಮಯದಲ್ಲಿ, ಚಿದಂಬರಂ ಕಡೆಗೆ ಹೋಗುತ್ತಿದ್ದ ರೈಲು ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಮೂವರು ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10 ಜನರು ಗಾಯಗೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡ ಶಾಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
