ಮೊದಲ ಅಗ್ನಿವೀರರ ತರಬೇತಿ 2022 ರ ಡಿಸೆಂಬರ್ ನಲ್ಲಿ ಪ್ರಾರಂಭ: ಸೇನಾ ಮುಖ್ಯಸ್ಥ

Prasthutha|

ನವದೆಹಲಿ:  ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ಮೊದಲ ಅಗ್ನಿವೀರರ ತರಬೇತಿ 2022 ರ ಡಿಸೆಂಬರ್ ನಲ್ಲಿ ಪ್ರಾರಂಭವಾಗಲಿದೆ ಮತ್ತು ಸಕ್ರಿಯ ಸೇವೆ 2023 ರ ಮಧ್ಯದಲ್ಲಿ ಪ್ರಾರಂಭವಾಗಲಿದೆ ಎಂದು  ಹೇಳಿದ್ದಾರೆ.

- Advertisement -

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಮುಂದಿನ ಎರಡು ದಿನಗಳಲ್ಲಿ, ಅಧಿಕೃತ ವೆಬ್ಸೈಟ್ ನಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಅದರ ನಂತರ ನಮ್ಮ ಸೇನಾ ನೇಮಕಾತಿ ಸಂಸ್ಥೆಗಳು ನೋಂದಣಿ ಮತ್ತು ವಿವರವಾದ ವೇಳಾಪಟ್ಟಿಯನ್ನು ಘೋಷಿಸುತ್ತದೆ ಎಂದು ಹೇಳಿದ್ದಾರೆ.

Join Whatsapp