Home ಟಾಪ್ ಸುದ್ದಿಗಳು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ವರ್ಗಾವಣೆ

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ| ರಾಜ್ಯ ಸರ್ಕಾರದಿಂದ ಐವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು : ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ನಡೆಸಿದ್ದು, ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಐವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ಈ ಕುರಿತು ಆದೇಶ ಹೊರಡಿಸಿದ ರಾಜ್ಯ ಸರ್ಕಾರ, ­ಡಾ.ರಮಣ ರೆಡ್ಡಿ.ಇ.ವಿ ಅವರನ್ನು ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ತೆಗೆದು ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಡಿಪಾರ್ಟ್ ಮೆಂಟ್ ಗೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಹುದ್ದೆಯಲ್ಲಿದ್ದ ಡಾ.ರಾಜ್ ಕುಮಾರ್ ಖಂತ್ರಿಯವರನ್ನು ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ ಡಾ.ರಮಣ ರೆಡ್ಡಿ ಅವರಿಗೆ ಹೆಚ್ಚುವರಿ ಹುದ್ದೆಯಾಗಿ ಇನ್ಫರ್ಮೇಷನ್ ಟೆಕ್ನಾಲಜಿ ಹಾಗೂ ವಯೋ ಟೆಕ್ನಾಲಜಿ ಡಿಪಾರ್ಟ್ ಮೆಂಟ್ ನ ಹೊಣೆಗಾರಿಕೆ ವಹಿಸಲಾಗಿದೆ.

ಇನ್ನೂ ಡಾ.ರಾಜ್ ಕುಮಾರ್ ಖಂತ್ರಿ ಅವರನ್ನು ಕಾಮರ್ಸ್ ಮತ್ತು ಇಂಡಸ್ಟ್ರೀಸ್ ಡಿಪಾರ್ಟ್ ಮೆಂಟ್ ನ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಗ್ರಿಕಲ್ಚರಲ್ ಡಿಪಾರ್ಟ್ಮೆಂಟ್ ಗೆ ವರ್ಗಾವಣೆ ಮಾಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ಜಾವೇದ್ ಅಖ್ತರ್ ಅವರನ್ನು ವರ್ಗಾವಣೆ ಮಾಡಿ, ಫಾರೆಸ್ಟ್, ಎಕೋಲಜಿ ಮತ್ತು ಎನ್ವಿರಾರ್ನಮೆಂಟ್ ಡಿಪಾರ್ಮೆಂಟ್ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕೋ ಆಪರೇಟಿವ್ ಡಿಪಾರ್ಟ್ ಮೆಂಟ್ ನ ಪ್ರಿನ್ಸಿಪಲ್ ಸೆಕ್ರೇಟರಿ ಹುದ್ದೆಯಿಂದ ತುಷಾರ್ ಗಿರೀಶ್ ಅವರನ್ನು ವರ್ಗಾವಣೆ ಮಾಡಿ, ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ಮಂಜುನಾಥ್ ಪ್ರಸಾದ್ ಅವರನ್ನು ವರ್ಗಾವಣೆ ಮಾಡಿ, ಮುಖ್ಯಮಂತ್ರಿಗಳ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಇದಲ್ಲದೇ ವಾರ್ತಾ ಮತ್ತು ಸಂಪರ್ಕ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿಯೂ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.

Join Whatsapp
Exit mobile version