ಹಾವೇರಿ: ಡಿಪೋ ಆವರಣದಲ್ಲಿಯೇ ಸಾರಿಗೆ ನೌಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಣೆಬೇನ್ನೂರು ನಗರ ಹೊರ ಹೊಲಯದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC) ಬಸ್ ಡಿಪೋದಲ್ಲಿ ನಡೆದಿದೆ.
ಮಲ್ಲನಗೌಡ ಬಡಿಗೇರ (48) ಮೃತ ಸಾರಿಗೆ ನೌಕರ. ಇನ್ನು ಆತ್ಮಹತ್ಯೆ ಕಾರಣ ತಿಳಿದುಬಂದಿಲ್ಲ. ಹಲಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ತನಿಖೆ ನಡೆಸುತ್ತಿದ್ದಾರೆ.