ಸಾರಿಗೆ ನೌಕರರ ಆತ್ಮಹತ್ಯೆ: ನ್ಯಾಯ ದೊರಕಿಸಿಕೊಡಲು ಆಮ್ ಆದ್ಮಿ ಪಕ್ಷದಿಂದ ಭಾರಿ ಪ್ರತಿಭಟನೆ

Prasthutha|

ಬೆಂಗಳೂರು: ಬಿಎಂಟಿಸಿ ನೌಕರ ಹೊಳೆಬಸಪ್ಪ ಆತ್ಮಹತ್ಯೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ನೂರಾರು ಜನ ಕಾರ್ಯಕರ್ತರು ಗಳು ರಾಜರಾಜೇಶ್ವರಿನಗರದ ಚನ್ನಸಂದ್ರ ಡಿಪೋ ಬಳಿ ಪ್ರತಿಭಟನೆಯನ್ನು ನಡೆಸಿದರು.

- Advertisement -

ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಸ್ಥಳಕ್ಕೆ ಆಗಮಿಸಬೇಕೆಂದು ಮೃತ ಶವವನ್ನು ಇಟ್ಟುಕೊಂಡು ಪ್ರತಿಭಟನೆ ನಡೆಸಿದರು.

ಕೇವಲ 24 ಗಂಟೆಗಳಲ್ಲಿ ಜಿಗಣಿ, ಬನಶಂಕರಿ ಹಾಗೂ ಚನ್ನಸಂದ್ರ ಡಿಪೋಗಳ ಮೂವರು ಸಾರಿಗೆ ನೌಕರರು ಆತ್ಮಹತ್ಯೆಗೆ ಶರಣಾಗಿರುವುದು ಭಾರಿ ದುರಂತ. ಸರ್ಕಾರ ಇಷ್ಟೆಲ್ಲ ಅನಾಹುತಗಳ ಆಗುತ್ತಿದ್ದರೂ ಸಹ ಕಣ್ಣು ಕಿವಿ ಕೇಳಿಸದಂತೆ ಮೂಕ ಪ್ರೇಕ್ಷಕನಾಗಿರುವುದು ದುರದೃಷ್ಟಕರ ಎಂದು ಮೋಹನ್ ದಾಸರಿ ತಿಳಿಸಿದರು.

- Advertisement -

ಆತ್ಮಹತ್ಯೆಗೆ ಕಾರಣರಾದ ಡಿಪೋ ಮ್ಯಾನೇಜರ್ ಬಂಧಿಸಿ – ಅಮಾನತುಗೊಳಿಸಲು, 50 ಲಕ್ಷ ಪರಿಹಾರವನ್ನು ಸ್ಥಳದಲ್ಲೇ ಘೋಷಿಸಬೇಕೆಂದು ಪ್ರತಿಭಟನಕಾರರು ಆಗ್ರಹಿಸಿದರು.

ಸಾರಿಗೆ ಇಲಾಖೆ ನೌಕರರಿಗೆ ನಿರಂತರ ಕಿರುಕುಳ ಲಂಚಕೋರತನ ಇವುಗಳೆಲ್ಲವೂ ಶಾಶ್ವತವಾಗಿ ಪರಿಹಾರವಾಗಬೇಕು ಹಾಗೂ ಸಾರಿಗೆ ನೌಕರರ ವಿರುದ್ಧ ಸರ್ಕಾರದ ದ್ವೇಷ ನೀತಿಯನ್ನು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಖಂಡಿಸಿದರು.

ಪ್ರತಿಭಟನೆಯಲ್ಲಿ ಮುಖಂಡರುಗಳಾದ ಚನ್ನಪ್ಪಗೌಡ ನಲ್ಲೂರು, ಸುರೇಶ್ ರಾಥೋಡ್, ನಂಜಪ್ಪ ಕಾಳೇಗೌಡ, ಶ್ಯಾಮಸುಂದರ್ ಮನಂ ಶಶಿಧರ ಆರಾಧ್ಯ ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.



Join Whatsapp