ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ ಯತ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಿಫಲಗೊಳಿಸಿ ಕಾಸರಗೋಡು ಮೂಲದ ವ್ಯಕ್ತಿಯನ್ನು ಬಂಧಿಸಿದ್ದಾರೆ.
ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ವ್ಯಕ್ತಿಯೊಬ್ಬರು ಹಾಲಿನ ಹುಡಿಯ ಪ್ಯಾಕೇಟ್ ನಲ್ಲಿರಿಸಿ ಚಿನ್ನ ತಂದಿದ್ದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ವ್ಯಕ್ತಿಯನ್ನು ತಪಾಸಣೆ ನಡೆಸಿದಾಗ ಆತನ ಬಳಿಯಿದ್ದ 602 ಗ್ರಾಮ್ ತೂಕದ 31, 31,440 ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.