ಸಾರಿಗೆ ನೌಕರರ ಮುಷ್ಕರ 7 ನೇ ದಿನಕ್ಕೆ | ಇಂದು ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆ

Prasthutha|

ಬೆಂಗಳೂರು : ವೇತನ ಹೆಚ್ಚಳಕ್ಕೆ ಒತ್ತಾಯಿಸಿ, ಆರನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಬೇಕೆಂದು ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ಇಂದು 7 ನೇ ದಿನಕ್ಕೆ ಕಾಲಿಟ್ಟಿದ್ದು, ಯುಗಾದಿ ಹಬ್ಬಕ್ಕೆ ಸಂಬಳವಿಲ್ಲದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದು ರಾಜ್ಯಾದ್ಯಂತ ಭಿಕ್ಷೆ ಬೇಡುವ ಮೂಲಕ ವಿನೂತನ ಪ್ರತಿಭಟನೆಗೆ ಮುಂದಾಗಿದ್ದಾರೆ.

- Advertisement -

ಸಾರಿಗೆ ನೌಕರರು ತಟ್ಟೆ ಲೋಟ ಹಿಡಿದು ಕುಟುಂಬದ ಜೊತೆ ಭಿಕ್ಷಾಟನೆ ಮಾಡಲು ನಿರ್ಧರಿಸಿದ್ದು, ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಮರಳುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಈ ಕುರಿತು ಮಾತನಾಡಿರುವ ಕೋಡಿಹಳ್ಳಿ ಚಂದ್ರಶೇಖರ್, ನೌಕರರು ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಸದಾಶಿವನಗರದಲ್ಲಿ ಭಿಕ್ಷೆ ಬೇಡುವ ಮೂಲಕ ವಿಭಿನ್ನ ಚಳವಳಿ ನಡೆಸಲಿದ್ದಾರೆ. ಸಾರಿಗೆ ನೌಕರರಿಗೆ ವೇತನ ಕೊಡದಿದ್ರೆ ಅದು ಕಾನೂನು ಬಾಹಿರ, ಈ ಸಂಬಂಧ ಸಾರಿಗೆ ನೌಕರರು ರಾಜ್ಯಾದ್ಯಂತ ಪೊಲೀಸ್ ಠಾಣೆಗಳಲ್ಲಿ ದೂರು ಕೊಡಲಿದ್ದಾರೆ ಎಂದು ತಿಳಿಸಿದ್ದಾರೆ.



Join Whatsapp